ಸರ್ಕಾರ ಉಳಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ: ಡಿ.ಕೆ.ಸುರೇಶ್

Karnataka Government in crisis

08-07-2019

ಬೆಂಗಳೂರು: ಹೈಕಮಾಂಡ್ ಸೂಚನೆ ಮೇರೆಗೆ ಕಾಂಗ್ರೆಸ್‍ನ ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಪರಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಭದ್ರವಾಗಿರುತ್ತದೆ. ಸರ್ಕಾರವನ್ನು ಉಳಿಸಿಕೊಳ್ಳಲು ನಾವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ಶಾಸಕರ ಜೊತೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಅವರನ್ನು ಮರಳಿ ತರುವ ವಿಶ್ವಾಸವಿದೆ ಎಂದು ಹೇಳಿದರು.

ಅತೃಪ್ತರ ಜೊತೆ ಸಂಧಾನಕ್ಕಾಗಿ ಯಾವ ನಾಯಕರು ಹೋಗುತ್ತಿಲ್ಲ. ಶಾಸಕರೇ ಸ್ವಯಂ ಪ್ರೇರಿತರಾಗಿ ಅವರೇ ವಾಪಸ್ ಬರುತ್ತಾರೆ. ರಾಜೀನಾಮೆ ಕೊಟ್ಟಿರುವವರೆಲ್ಲರೂ ನಿಷ್ಠಾವಂತ ಕಾಂಗ್ರೆಸ್‍ನ ಶಾಸಕರು. ಕೆಲವು ಸಣ್ಣಪುಟ್ಟ ಗೊಂದಲಗಳಿಂದ ಅಸಮಾಧಾನಗೊಂಡಿದ್ದಾರೆ ಅವರೆಲ್ಲಾ ಮರಳಿ ಬರಲಿದ್ದಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

DK Suresh BJP Congress MLA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ