ನಿಲ್ಲಿಸಿದ ಲಾರಿಗೆ ಕಾರ್ ಡಿಕ್ಕಿ ಹೊಡೆದು ಓರ್ವ ಮೃತ

mans hits a standing vehicle dies

08-07-2019

ಬೆಂಗಳೂರು: ಚಿಕ್ಕಜಾಲದ ಸಾದರಹಳ್ಳಿ ಜಂಕ್ಷನ್ ಬಳಿ ಇಂದು ಬೆಳಿಗ್ಗೆ ಸಿಗ್ನಲ್ ಬಳಿ ನಿಲ್ಲಿಸಿದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಟಿಬೇಟಿಯನ್ನೊಬ್ಬ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಬೈಲಗುಪ್ಪೆಯ ದುರೇಜೆ (60)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಗಾಯಗೊಂಡಿರುವ ಕಾರು ಚಾಲಕ ಸೇರಿ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದರೆ, ಉಳಿದೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೈಲುಗುಪ್ಪೆಯಿಂದ ಹೊರಟು ಬೆಳಿಗ್ಗೆ 7.30ರ ವೇಳೆ ನಗರಕ್ಕೆ ಇಟಿಯೋ ಕಾರಿನಲ್ಲಿ ಮೂವರನ್ನು ಕೂರಿಸಿಕೊಂಡು ಬಂದ ಚಾಲಕ ಸಾದರಹಳ್ಳಿ ಗೇಟ್ ಬಳಿ ಸಿಗ್ನಲ್ ಹಾಕಿದ್ದಕ್ಕೆ ನಿಲ್ಲಿಸಿದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅಪಘಾತಕ್ಕೆ ಕಾರು ಚಾಲಕನ ಅತಿ ವೇಗವೇ ಕಾರಣವಾಗಿದ್ದು, ಪ್ರಕರಣ ದಾಖಲಿಸಿರುವ ಚಿಕ್ಕಜಾಲ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆಂದು ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Car accident Road accident Accident Cars


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ