ಸರ್ಕಾರ ಸರಾಗವಾಗಿ ನಡೆಯಲಿದೆ: ಸಿಎಂ ಕುಮಾರಸ್ವಾಮಿ

Karnataka Government crisis

08-07-2019

ಬೆಂಗಳೂರು: ಸರ್ಕಾರ ಸರಾಗವಾಗಿ ನಡೆಯಲಿದೆ. ಸಮಸ್ಯೆಯನ್ನು ಪರಿಹರಿಸಲಾಗುವುದು. ಯಾವುದಕ್ಕೂ ಯೋಚನೆ ಮಾಡಬೇಡಿ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆದಿದ್ದ ಭಾರೀ ಬೆಳವಣಿಗೆಯ ನಂತರ, ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಸರ್ಕಾರ ಉಳಿಯುವ ಭರವಸೆ ವ್ಯಕ್ತಪಡಿಸಿದರು.

ಇನ್ನು ಜೆಡಿಎಸ್ ಶಾಸಕರ ರಾಜೀನಾಮೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ, ತಮಗೆ ರಾಜೀನಾಮೆ ಸಲ್ಲಿಸುವಂತೆ ಪಕ್ಷದ ನಾಯಕರಿಂದ ಇದುವರೆಗೆ ಯಾವುದೇ ನಿರ್ದೇಶನ ಬಂದಿಲ್ಲ. ಒಂದು ವೇಳೆ ರಾಜೀನಾಮೆಗೆ ನಿರ್ದೇಶನ ನೀಡಿದರೆ ಖಂಡಿತ ನಾನು ರಾಜೀನಾಮೆ ನೀಡುತ್ತೇನೆ ಎಂದರು. ಈ ನಡುವೆ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಎಚ್ ಡಿ ರೇವಣ್ಣ ಸೇರಿದಂತೆ ಪಕ್ಷದ ನಾಯಕರು, ಶಾಸಕರು, ಕೆಲ ಸಚಿವರು ಹಾಜರಿದ್ದು ಮುಂದಿನ ಕಾರ್ಯತಂತ್ರದ ಕುರಿತು ಚರ್ಚೆ ನಡೆಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Karnataka Government BJP Congress HD Kumaraswamy


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ