ಯುವಕರು  ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು: ಸಾಯಿಪ್ರಕಾಶ್

youths should donate blood : Sai Prakash

08-07-2019

ಬೆಂಗಳೂರು: ಆರೋಗ್ಯವಂತ ಯುವಕರು  ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆಯಿಂದ ಬಳಲುವ ಅಮೂಲ್ಯ ಜೀವ ಉಳಿಸಲು ಮುಂದಾಗಬೇಕು ಎಂದು ಹಿರಿಯ ಸಿನೆಮಾ ನಿರ್ದೇಶಕ ಸಾಯಿಪ್ರಕಾಶ್ ಹೇಳಿದರು.

ನಗರದ ಕಿದ್ವಾಯಿ ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ರಕ್ತನಿಧಿ ಕೇಂದ್ರದಲ್ಲಿ ತಮ್ಮ ಹುಟ್ಟು ಹಬ್ಬದ ಅಂಗವಾಗಿ ಕ್ಯಾನ್ಸರ್ ರೋಗಿಗಳಿ ರಕ್ತದಾನ ಮಾಡಿದ ಬಳಿಕ ಮಾತನಾಡಿ ರಕ್ತದಾನದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿ ಬೇರೂರಿದೆ. ಇದನ್ನು ತೊಲಗಿಸಬೇಕಿದೆ ಎಂದರು.

ಆರೋಗ್ಯವಂತ ವ್ಯಕ್ತಿಗಳು ರಕ್ತದಾನಕ್ಕೆ ಮುಂದಾಗಿ ಮತ್ತೊಬ್ಬರಿಗೆ ಮಾದರಿಯಾಗಬೇಕು. ಯುವಕರು ರಕ್ತದಾನದ ಕುರಿತು ಇರುವ ಮೌಢ್ಯವನ್ನು ದೂರ ಮಾಡಬೇಕು ಎಂದು ತಿಳಿಸಿದರು.

ರಂಗಕರ್ಮಿ ಆ.ಶ್ರೀನಿವಾಸ್ ಮಾತನಾಡಿ, ರಕ್ತದಾನದಿಂದ ರಕ್ತದ ಅವಶ್ಯಕತೆ ಇರುವವರಿಗೆ ಮಾತ್ರ ಲಾಭವಾಗುವುದಿಲ್ಲ. ರಕ್ತದಾನಿಗಳೂ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಇದರಿಂದ ರಕ್ತದಾನ ಮಾಡಿದವರಲ್ಲಿ ಹೊಸ ರಕ್ತಕಣಗಳು ಉತ್ಪತ್ತಿಯಾಗುತ್ತವೆ. ಜತೆಗೆ ಹೃದಯಾಘಾತದ ಸಂಭವ, ರಕ್ತದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುತ್ತದೆ. ಆದ್ದರಿಂದ ರಕ್ತದಾನ ಮಾಡಲು ಹಿಂಜರಿಯಬಾರದು. ಈ ಬಗ್ಗೆ ಯುವಕರು ಜನರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ನಟರಾದ ಡಿಂಗ್ರಿ ನಾಗರಾಜ್, ಗಣೇಶ್ ರಾವ್ ಸೇರಿದಂತೆ ಪ್ರಮುಖರಿದ್ದರು.


ಸಂಬಂಧಿತ ಟ್ಯಾಗ್ಗಳು

Sai Prakash Blood donation Kidwai Health


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ