ತಂದೆಯ ನಿರ್ಧಾರಕ್ಕೆ ಬದ್ಧ : ಸೌಮ್ಯಾರೆಡ್ಡಿ

Karnataka Government in crisis

09-07-2019

ಬೆಂಗಳೂರು: ಕಾಂಗ್ರೆಸ್ ನಾಯಕರ ನಿಲುವಿನಿಂದ ಬೇಸರಗೊಂಡು ರಾಮಲಿಂಗಾರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಅವರ ಮಗಳು ಸೌಮ್ಯಾರೆಡ್ಡಿ ಕೂಡಾ ಇದೆ ಹಾದಿ ಹಿಡಿಯಲಿದ್ದಾರೆ ಎನ್ನಲಾಗಿದೆ. ಇದರ ನಡುವೆ ನನ್ನ ತಂದೆಯ ನಿರ್ಧಾರಕ್ಕೆ ನಾನು ಬದ್ಧಳಾಗಿದ್ದೇನೆ ಎಂದು ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾನು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸುತ್ತೇನೆ. ಅಪ್ಪ ಏನೂ ಮಾಡಿದರೂ ನಾನು ಅವರಿಗೆ ಬೆಂಬಲ ನೀಡುತ್ತೇನೆ. ಅಪ್ಪ 45 ವರ್ಷದಿಂದ ಪಕ್ಷ ಕಟ್ಟಿದ್ದಾರೆ ಹಾಗೂ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರಿಗೆ ಯಾವುದು ಸೂಕ್ತ ಎಂದು ಅನಿಸುತ್ತೋ ಅದನ್ನು ಅವರು ಮಾಡಲಿ. ನಾನು ಅವರಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದರು.

ನಾನು ರಾಜೀನಾಮೆ ನೀಡುವುದರ ಬಗ್ಗೆ ಯೋಚನೆ ಮಾಡಿಲ್ಲ. ತಂದೆ ಹಾಗೂ ಬೆಂಬಲಿಗರು ಏನೂ ನಿರ್ಧಾರ ಮಾಡುತ್ತಾರೋ ಅವರ ನಿರ್ಧಾರಕ್ಕೆ ನಾನು ಬದ್ಧಳಾಗಿರುತ್ತೇನೆ ಎಂದು ಸ್ಪಷ್ಟ ಪಡಿಸಿದರು.

ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವುದರಿಂದ ದೆಹಲಿಗೆ ಹೋಗಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೇನೆ. ರಾಜೀನಾಮೆ ನೀಡಬೇಡಿ ಎಂದು ಕಾಂಗ್ರೆಸ್ ನಾಯಕರು ಸಲಹೆ ಮಾಡಿದ್ದಾರೆ ಆದರೆ, ಈ ವಿಷಯದಲ್ಲಿ ನನ್ನ ತಂದೆ ಹಾಗೂ ಬೆಂಬಲಿಗರು ಏನು ಹೇಳುತ್ತಾರೋ ಹಾಗೆ ಕೇಳುತ್ತೇನೆ ಎಂದರು

ರಾಜಕೀಯ ಬೆಳವಣಿಗೆಯಿಂದ ನನಗೆ ತುಂಬಾ ಬೇಸರವಾಗಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

Congress MLA JDS Soumya Reddy


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ