ಮುಖ್ಯಮಂತ್ರಿ ಚಂದ್ರುಗೆ ಹೃದಯದ ಶಸ್ತ್ರ ಚಿಕಿತ್ಸೆ

Mukhyamantri Chandru

09-07-2019

ಬೆಂಗಳೂರು : ಕನ್ನಡ ಸಿನಿಮಾ ಲೋಕದ ಖ್ಯಾತ ನಟ ಹಾಗೂ ರಂಗಕರ್ಮಿ ಮುಖ್ಯಮಂತ್ರಿ ಚಂದ್ರು ಹೃದಯ ಸಂಬಂಧಿ ಖಾಯಿಲೆ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರತಿಷ್ಟಿತ ಜಯದೇವ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಚಂದ್ರು ದಾಖಲಾಗಿದ್ದು ಅವರಿಗೆ ಹೃದಯದ ಶಸ್ತ್ರ ಚಿಕಿತ್ಸೆ ನಡೆದಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯೂ ಆಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಜಯದೇವ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸೀತಾರಾಮ್‌ಭಟ್ ಅವರು ಚಂದ್ರು ಅವರಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದಾರೆ. ಹಾಗೂ ಇವರೊಂದಿಗೆ ಚಿಕಿತ್ಸೆಗೆ ಆಸ್ಪತ್ರೆಯ ನಿರ್ದೇಶಕ ಮಂಜುನಾಥ್ ಅವರು ಜತೆಯಾಗಿದ್ದರು. ಪ್ರಸ್ತುತ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ವೈದ್ಯರು ಪೋಸ್ಟ್ ನೇಟಲ್ ಕೇರ್ ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Actor Heart Operation Mukhyamantri Chandru Jayadeva Hospital


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ