ಸರ್ಕಾರ ಉಳಿಸಲು ಸಿಎಂ ಕಸರತ್ತು

Karnataka Government in crisis

09-07-2019

ಬೆಂಗಳೂರು: ಅಳಿವಿನಂಚಿಗೆ ತಲುಪಿರುವ ಸರಕಾರವನ್ನು ಉಳಿಸಿಕೊಳ್ಳಲು ಸಿಎಂ ಕುಮಾರಸ್ವಾಮಿ ಹಲವಾರು ಕಸರತ್ತು ನಡೆಸಿದ್ದಾರೆ. ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ಸತತ ಸಮಾಲೋಚನೆ ನಡೆಸಿದ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ಮತ್ತು ಡಿಸಿಎಂ ಪರಮೇಶ್ವರ್ ಅವರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದರು. ಸಿಎಂ ಮತ್ತು ದೇವೇಗೌಡರು ಮಾತುಕತೆ ನಡೆಸಿ ಸರ್ಕಾರದ ಅಳಿವು-ಉಳಿವಿನ ಬಗ್ಗೆ ನಿರ್ಣಾಯಕ ತೀರ್ಮಾನ ತೆಗೆದುಕೊಳ್ಳುವ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೆ ಸಿಎಂ ಅವರು ಡಿಜಿ ಮತ್ತು ಐಜಿ ಜೊತೆಗೂ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.


ಸಂಬಂಧಿತ ಟ್ಯಾಗ್ಗಳು

Congress HD Kumaraswamy JDS Karnataka Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ