ಸರ್ಕಾರ ಅಸ್ಥಿರಗೊಳಿಸುವುದೇ ಬಿಜೆಪಿ ಹವ್ಯಾಸ: ಸಿದ್ದರಾಮಯ್ಯ

Siddaramaiah Statement

09-07-2019

ಬೆಂಗಳೂರು: ಸರ್ಕಾರವನ್ನು ಅಸ್ಥಿರಗೊಳಿಸುವುದೇ ಬಿಜೆಪಿಯ ಹವ್ಯಾಸ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಇದು ಪ್ರಜಾಪ್ರಭುತ್ವದ ವಿರುದ್ಧದ ನಡೆ. ಜನತೆ ಬಿಜೆಪಿಗೆ ಸರ್ಕಾರ ರಚಿಸುವ ಅಧಿಕಾರವನ್ನು ನೀಡಿಲ್ಲ. ಜನ ನಮ್ಮಿಬ್ಬರಿಗೆ ಮತ ನೀಡಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಒಟ್ಟಿಗೆ ಶೇ. 57ರಷ್ಟು ಮತ ಪಡೆದಿವೆ ಎಂದರು.

ಈ ಬಾರಿ ಬಿಜೆಪಿ ಪಡೆಯೊಂದಿಗೆ ರಾಷ್ಟ್ರೀಯ ನಾಯಕರಾದ ಅಮಿತ್ ಶಾ ಮತ್ತು ಮೋದಿಯವರು ಕೂಡ ಭಾಗಿಯಾಗಿದ್ದಾರೆ. ಅವರ ನಿರ್ದೇಶನದಂತೆ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮತ್ತು ಜನರ ಆದೇಶಕ್ಕೆ ವಿರುದ್ಧವಾದುದು. ಅವರು ಹಣ, ಹುದ್ದೆ, ಸಚಿವ ಸ್ಥಾನಗಳನ್ನು ಕೊಡುವ ಆಮಿಷವೊಡ್ಡಿದ್ದಾರೆ ಎಂದರು.

ಕರ್ನಾಟಕ ಕಾಂಗ್ರೆಸ್ ರಾಜೀನಾಮೆ ನೀಡಿರುವ ಸದಸ್ಯರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಯ ಆಧಾರದಲ್ಲಿ ಅಮಾನತು ಮಾಡಲು ಮನವಿ ಮಾಡಿದೆ. ಅವರು ಬಿಜೆಪಿಯವರೊಂದಿಗೆ ಕೈಜೋಡಿಸಿದ್ದಾರೆ. ನಾನು ಅವರು ವಾಪಸ್ ಬರುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಮತ್ತು ತಮ್ಮ ರಾಜೀನಾಮೆಯನ್ನು ಹಿಂಪಡೆಯಬೇಕು ಎಂದರು. ನಾವು ಸ್ಪೀಕರ್ ಅವರಿಗೆ ಅವರ ರಾಜೀನಾಮೆಯನ್ನು ಸ್ವೀಕರಿಸಬಾರದು ಎಂದು ಮನವಿ ಮಾಡುತ್ತಿದ್ದೇವೆ ಎಂದರು.

ಪಕ್ಷಾಂತರ ನಿಷೇಧ ಕಾನೂನಿನ ಅಡಿಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾವು ಸ್ಪೀಕರ್ ಅವರ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇವೆ. ರಾಜೀನಾಮೆ ನೀಡಿರುವ ಶಾಸಕರನ್ನು ಅನರ್ಹಗೊಳಿಸುವುದಷ್ಟೇ ಅಲ್ಲ, ಮುಂದಿನ 6 ವರ್ಷಗಳ ಕಾಲ ಅವರು ಚುನಾವಣೆಗೆ ನಿಲ್ಲದಂತೆ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Siddaramaiah BJP Congress Allegation


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ