ಜೆಡಿಎಸ್ ಶಾಸಕರಿಗೆ ಇನ್ನೂ ಎರಡು ದಿನ ರೆಸಾರ್ಟ್ ವಾಸ್ತವ್ಯ

Karnataka Crisis

10-07-2019

ಬೆಂಗಳೂರು: ಆಪರೇಷನ್ ಕಮಲಕ್ಕೆ ಒಳಗಾಗುವುದನ್ನು ತಪ್ಪಿಸಲು ಜೆಡಿಎಸ್ ಶಾಸಕರು ದೇವನಹಳ್ಳಿ ಬಳಿಯ ಖಾಸಗಿ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದು, ಇನ್ನೂ ಎರಡು ದಿನಗಳ ಕಾಲ ಅಲ್ಲೇ ಉಳಿಯಲಿದ್ದಾರೆ.

ಜೆಡಿಎಸ್‍ನ ಶಾಸಕರಾದ ಎಚ್. ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉಳಿದ ಶಾಸಕ ಯಾರು ಆ ರೀತಿಯ ನಿರ್ಧಾರ ಕೈಗೊಳ್ಳದಂತೆ ಮತ್ತು ಶಾಸಕರಲ್ಲಿ ಒಗ್ಗಟ್ಟು ಕಾಪಾಡಿಕೊಳ್ಳುವ ಉದ್ದೇಶ ದಿಂದ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮತ್ತೆ ಜೆಡಿಎಸ್‍ನ ಕೆಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ಹಬ್ಬಿದ ಹಿನ್ನೆಲೆಯಲ್ಲಿ ಶಾಸಕರನ್ನು ಒಂದೆಡೆ ಸೇರಿಸಲಾಗಿದೆ.

ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಸಂಕಷ್ಟವನ್ನು ಪರಿಹರಿಸಲು ಹರಸಾಹಸ ಪಡುತ್ತಿರುವ ಜೆಡಿಎಸ್ ವರಿಷ್ಠರು ಉಳಿದಿರುವ ಶಾಸಕರಾರೂ ಆಪರೇಷನ್ ಕಮಲಕ್ಕೆ ಒಳಗಾಗದಂತೆ ಎಚ್ಚರಿಕೆ ವಹಿಸಿದ್ದಾರೆ.

ಅತೃಪ್ತ ಶಾಸಕರ ರಾಜೀನಾಮೆ ಯಿಂದ ಎದುರಾಗಿರುವ ಬಿಕ್ಕಟ್ಟನ್ನು ಪರಿಹರಿಸಿ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ಹರಸಾಹಸ ಮಾಡುತ್ತಿದ್ದು, ಜೆಡಿಎಸ್ ಶಾಸಕರು ಒಗ್ಗಟ್ಟಿನಿಂದ ಇರುವಂತೆ ಮನವಿ ಮಾಡಿಕೊಂಡಿದ್ದು, ಎಲ್ಲರನ್ನು ಒಂದೆಡೆ ಸೇರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Resort JDS MLA JDS


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ