ಸಿ.ಎಂ‌.ರಾಜಿನಾಮೆಗೆ ಆಗ್ರಹ -ಬಿಜೆಪಿ ಶಾಸಕರ ಧರಣಿ

BJP demanding resignation of Kumaraswamy as CM

10-07-2019

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ  ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಮಹಾತ್ಮಗಾಂಧೀಜಿ ಪ್ರತಿಮೆ ಎದುರು ಬಿಜೆಪಿ ಶಾಸಕರು ಧರಣಿ ನಡೆಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ
ನೇತೃತ್ವದಲ್ಲಿ ಬಿಜೆಪಿಯ ಬಹುತೇಕ ಶಾಸಕರು  ಧರಣಿ ನಡೆಸಿ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರು.

ಕಾಂಗ್ರೆಸ್-ಜೆಡಿಎಸ್‍ನ ಹಲವು ಶಾಸಕರು ರಾಜೀನಾಮೆ ನೀಡಿದ್ದು, ಸರ್ಕಾರ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ನೈತಿಕತೆ ಇದ್ದರೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬಾರದು. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಆದರೂ ಕೂಡ ಮುಂದುವರಿಯುವುದು ಶೋಭೆ ತರುವುದಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.


ಸಂಬಂಧಿತ ಟ್ಯಾಗ್ಗಳು

Politics BJP Congress JDS


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ