ಸಂಕಷ್ಟಕ್ಕೆ ಸಿಲುಕಿದ ಸಿ.ಎಂ ಗೆ ಡಿಕೆಶಿ ಸಂಕಷ್ಟಹರನೇ?

Will DKS troubleshoot CMs problems?

10-07-2019

ಬೆಂಗಳೂರು: ಅತೃಪ್ತ ಶಾಸಕರ ಬಿಗಿಪಟ್ಟಿನಿಂದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಡಕ್ಕೆ ಸಿಲುಕಿದ್ದಾರೆ. ಶಾಸಕರ ರಾಜೀನಾಮೆಯಿಂದ ಸರ್ಕಾರಕ್ಕೆ ಎದುರಾಗಿರುವ ಸಂಕಷ್ಟ ಪರಿಹರಿಸುವ ಸಂಬಂಧ ಮಾಜಿ ಪ್ರಧಾನಿ ದೇವೇಗೌಡ ಅವರ ಸಲಹೆಯನ್ನು ಕೂಡ ಪಡೆದಿದ್ದಾರೆ. ಇಂದು ಕೂಡ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ನಾಯಕರೊಂದಿಗೆ  ಸಮಾಲೋಚನೆ ನಡೆಸಿದ್ದು, ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮ ರದ್ದು ಪಡಿಸಿದ್ದಾರೆ.
ಹೇಗಾದರೂ ಮಾಡಿ ಅತೃಪ್ತ ಶಾಸಕರನ್ನು ಸಂಪರ್ಕಿಸಿ ಮನವೊಲಿಸುವ ಪ್ರಯತ್ನ ಮಾಡುವಂತೆ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗಕ್ಕೆ ಮನವಿ ಮಾಡಿದ್ದು, ಪರ್ಯಾಯ ಮಾರ್ಗೋಪಾಯಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ 
ಕಳೆದ ಮೂರು ದಿನಗಳಿಂದಲೂ ಕಾಂಗ್ರೆಸ್ ನಾಯಕರೊಂದಿಗೆ ನಿರಂತರ ಸಂಪರ್ಕ, ಸಮಾಲೋಚನೆ ನಡೆಸುತ್ತಿರುವ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಉಳಿವಿಗೆ ಸಾಧ್ಯವಿರುವ ಪರಿಹಾರ ಕ್ರಮಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆಂದು ತಿಳಿದುಬಂದಿದೆ.
ರೆಸಾರ್ಟ್‍ನಲ್ಲಿ ಉಳಿದುಕೊಂಡಿರುವ ಜೆಡಿಎಸ್ ಶಾಸಕರೊಂದಿಗೂ ಸಮಾಲೋಚನೆ ನಡೆಸಿದ್ದು, ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಚಲಿತ ರಾಜಕೀಯ ವಿದ್ಯಮಾನ ಹಾಗೂ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಸಂಬಂಧಿತ ಟ್ಯಾಗ್ಗಳು

DK Shivakumar DKS Kumaraswamy Karnataka Politics


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ