ಮೈತ್ರಿ ಸರ್ಕಾರ ಅಸ್ತಿರಕ್ಕೆ ಮಹಾರಾಷ್ಟ್ರ ಯತ್ನ :ವೇಣುಗೋಪಾಲ್

Maharashtra government trying to help BJP

10-07-2019

ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ಡಿ.ಕೆ.ಶಿವಕುಮಾರ್ ಅವರನ್ನು ಹೋಟೆಲ್ ಪ್ರವೇಶಿಸದಂತೆ ತಡೆಯುವ ಮೂಲಕ ಬಿಜೆಪಿ ಅಣತಿಯಂತೆ ನಡೆದುಕೊಳ್ಳುತ್ತಿದೆ. ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ  ಯತ್ನಿಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರನ್ನು  ಹೋಟೆಲ್ ಪ್ರವೇಶಿಸದಂತೆ ತಡೆದಿರುವುದು ಸರಿಯಲ್ಲ.ಆ ಹೋಟೆಲ್‍ನಲ್ಲಿ ಡಿ.ಕೆ.ಶಿವಕುಮಾರ್ ಅವರು ರೂಂ ಬುಕ್ ಮಾಡಿಕೊಂಡಿದ್ದಾರೆ. ಹೀಗಾಗಿ ಹೋಟೆಲ್ ಒಳಗೆ ಹೋಗುವ ಎಲ್ಲಾ ಅಧಿಕಾರ ಅವರಿಗಿದೆ. ಅವರನ್ನು ಯಾವ ಕಾರಣಕ್ಕಾಗಿ ತಡೆದರು ಎಂಬುದು ಗೊತ್ತಿಲ್ಲ. ಬಿಜೆಪಿಯ ಹುನ್ನಾರ ಈ ಮೂಲಕ ಸ್ಪಷ್ಟವಾಗುತ್ತಿದೆ ಎಂದು ಆಪಾದಿಸಿದರು.

ಕಾಂಗ್ರೆಸ್‍ನ ತಮ್ಮ ಸ್ನೇಹಿತರನ್ನು ಭೇಟಿ ಮಾಡಲು ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರವಿದೆ. ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮಹಾರಾಷ್ಟ್ರ ಸರ್ಕಾರ ಡಿಕೆಶಿ ಅವರ ನಿಯೋಗವನ್ನು ತಡೆಯುತ್ತಿದೆ.

ಈ ಮೂಲಕ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರ ಅಸ್ಥಿರಗೊಳಿಸುವ ಸಂಚಿನಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದರು.
ರಾಮಲಿಂಗ ರೆಡ್ಡಿ ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಜತೆ ನಮ್ಮೆಲ್ಲ ಹಿರಿಯ ನಾಯಕರು ಮಾತುಕತೆ ನಡೆಸಿದ್ದು, ಮನವೊಲಿಸುವ ಪ್ರಯತ್ನ ನಡೆಸಿದ್ದೇವೆ. ಅವರು ಕಾಂಗ್ರೆಸ್‍ನಲ್ಲಿ ಉಳಿಯುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

DK Shivakumar BJP Congress JDS


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ