ರಾಜಿನಾಮೆ ಅಂಗೀಕಾರ ಮಾಡಿ: ಯಡಿಯೂರಪ್ಪ

Accept resignations: Yadiyurappa

10-07-2019

ಬೆಂಗಳೂರು: ವಿಧಾನಸಭಾಧ್ಯಕ್ಷ  ರಮೇಶ್ ಕುಮಾರ್ ಕಾನೂನುಬದ್ಧವಾಗಿ ಕೆಲಸ ಮಾಡಬೇಕು. ಶಾಸಕರು ಸ್ವಯಂಪ್ರೇರಿತರಾಗಿ ನೀಡಿರುವ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್‍ಕುಮಾರ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಈವರೆಗೂ ಅವರು ಎಳ್ಳಷ್ಟೂ ಸಂಶಯಕ್ಕೆ ಅನುಮಾನವಿಲ್ಲದೆ ಸ್ಪೀಕರ್ ಹುದ್ದೆಯನ್ನು ನಿಭಾಯಿಸಿದ್ದಾರೆ. ಮುಂದೆಯೂ ಕೂಡ ಅವರಿಂದ ಅದನ್ನೇ ನಿರೀಕ್ಷೆ ಮಾಡುತ್ತೇವೆ ಎಂದು ಹೇಳಿದರು.
ಶಾಸಕರೇ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡುತ್ತೇವೆಂದು ಹೇಳಿರುವಾಗ ಅದನ್ನು ವಿಳಂಬ ಮಾಡುವುದು ಇಲ್ಲವೆ ಕ್ರಮಬದ್ಧವಾಗಿಲ್ಲ ಎಂದು ಹೇಳುವುದು ಸರಿಯಲ್ಲ. ಎಲ್ಲಾ ಪಕ್ಷದವರೂ ಸರ್ವಾನುಮತದಿಂದ ರಮೇಶ್‍ಕುಮಾರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದೇವೆ. ಆದರೆ, ಅವರು ಕಾನೂನುಬದ್ಧವಾಗಿ ಕೆಲಸ ಮಾಡುತ್ತಿಲ್ಲ. ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲು ಏಕೆ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಕ್ರಮಬದ್ಧವಲ್ಲದ ರಾಜೀನಾಮೆ ನೀಡಿದವರು ಮತ್ತೊಮ್ಮೆ ಬಂದು ಸರಿಯಾದ ಮಾದರಿಯಲ್ಲಿ ರಾಜೀನಾಮೆ ಸಲ್ಲಿಸುತ್ತಾರೆ. ಆದರೆ, ರಾಜೀನಾಮೆಗಳು ಕ್ರಮಬದ್ಧವಾಗಿವೆ ಎಂದು ಅವರೇ ಹೇಳಿರುವ ರಾಜೀನಾಮೆಗಳನ್ನಾದರೂ ಕೂಡಲೇ ಕಾನೂನು ಬದ್ಧವಾಗಿ ಅಂಗೀಕಾರ ಮಾಡಲಿ ಎಂದು ಮನವಿ ಮಾಡಿದರು.
 


ಸಂಬಂಧಿತ ಟ್ಯಾಗ್ಗಳು

Yadiyurappa Congress Karnataka government JDS


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ