ಡಿಕೆಶಿ ಮುಂಬೈ ಪೊಲೀಸರ ವಶಕ್ಕೆ

D K Shivkumar is arrested

10-07-2019

ಅತೃಪ್ತ ಶಾಸಕರನ್ನು ಭೇಟಿಯಾಗಲು ಮುಂಬೈಗೆ ತೆರಳಿದ್ದ ಸಚಿವ ಡಿಕೆ ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಕಾರದ ವಿರುದ್ಧ ಬಂಡೆದ್ದು, ರಾಜೀನಾಮೆ ನೀಡಿ ಬಂದಿರುವ ಅತೃಪ್ತ ಶಾಸಕರನ್ನು ಭೇಟಿಯಾಗಿ ಮನವೊಲಿಸಲು ಬಂದಿದ್ದ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್  ಅವರಿಗೆ ಮುಂಬೈನ ರಿನೈಸೆನ್ಸ್ ಹೋಟೆಲ್ ಸಿಬ್ಬಂದಿ ಒಳಗೆ ಬಿಡದಿದ್ದುದರಿಂದ ವಾಗ್ವಾದ ಆರಂಭವಾಗಿತ್ತು. ಬೆಳಗ್ಗೆಯಿಂದಲೂ ಹೋಟೆಲ್ ಬಳಿಯೇ ಇದ್ದ ಡಿಕೆ ಶಿವಕುಮಾರ್ ಅವರನ್ನು ಇದೀಗ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಮಧ್ಯೆ ಮುಂಬೈ ಪೊಲೀಸರು ಏಕಾಏಕಿ ಡಿಕೆಶಿಯವರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಿಟಿ ದೇವೇಗೌಡ ಹಾಗೂ ಶಿವಲಿಂಗೇಗೌಡ ಗಲಿಬಿಲಿಗೊಂಡಿದ್ದಾರೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

D K Shivkumar Police Mumbai Shivalinge gowda


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ