ಬಿಜೆಪಿ ನಾಯಕರಿಗೆ ಹೊಸ ತಲೆನೋವು

Karnataka Government crisis

11-07-2019

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಗೋಪಾಲಯ್ಯ, ಬೈರತಿ ಬಸವರಾಜ್ ಮತ್ತು ಮುನಿರತ್ನ ಅವರನ್ನು ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಬೆಂಗಳೂರು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.

ಮಾಜಿ ಉಪಮೇಯರ್ ಎಸ್.ಹರೀಶ್, ಬಿಬಿಎಂಪಿ ಮಾಜಿ ಸದಸ್ಯ ಎಂ.ನಾಗರಾಜ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಬಿಜೆಪಿ ಮುಖಂಡ ಪ್ರಸನ್ನ ಮತ್ತಿತರರು ಇಂದು ಪಕ್ಷದ ವರಿಷ್ಠರನ್ನು ಭೇಟಿಯಾಗಿ ಇವರನ್ನು ಸೇರಿದಂತೆ ಮನವಿ ಸಲ್ಲಿಸಿದರು.

ಮಾಜಿ ಉಪಮೇಯರ್ ಎಸ್.ಹರೀಶ್ ನೇತೃತ್ವದಲ್ಲಿ ನಿಯೋಗ ಇಂದು ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್.ಯಡಿಯೂರಪ್ಪ ನಿವಾಸದ ಬಳಿ ಆಗಮಿಸಿ, ಈ ಕುರಿತು ತಮ್ಮ ಮನವಿ ಸಲ್ಲಿಸಿದ್ದು, ಈವರೆಗೆ ಕಾರ್ಯಕರ್ತರು ಗೋಪಾಲಯ್ಯನವರ ವಿರುದ್ಧ ಕೆಲಸ ಮಾಡಿದ್ದಾರೆ. ಇದೀಗ ಅವರ ಪರವಾಗಿ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ನಂದೀಶ್ ರೆಡ್ಡಿ ನೇತೃತ್ವದ ನಿಯೋಗ ಬೈರತಿ ಬಸವರಾಜ್ ಬಿಜೆಪಿ ಸೇರ್ಪಡೆಗೆ ವಿರೋಧಿಸಿತ್ತು. ಪಕ್ಷದ ಸಭೆಯಲ್ಲಿ ತುಳಸಿ ಮುನಿರಾಜು, ಮುನಿರತ್ನ ಸೇರ್ಪಡೆಗೆ ವಿರೋಧಿಸಿದ್ದರು. ಹೀಗಾಗಿ ಬಿಜೆಪಿ ಸೇರುವ ಹೊಸ್ತಿಲಲ್ಲಿ ನಿಂತಿರುವ ಬೆಂಗಳೂರು ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಸಂಕಷ್ಟ ಎದುರಾಗಿದೆ.

 


ಸಂಬಂಧಿತ ಟ್ಯಾಗ್ಗಳು

BJP Resignation MLA Karnataka Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ