ರಾಜ್ಯಪಾಲರ ವಿರುದ್ಧ ದಿನೇಶ್ ಗುಂಡೂರಾವ್ ಆರೋಪ

Dinesh Gundurao Statement

11-07-2019

ಬೆಂಗಳೂರು: ರಾಜ್ಯಪಾಲ ವಜುಬಾಯಿ ವಾಲಾ ಅವರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜಭವನವನ್ನು ತನ್ನ ಪಕ್ಷದ ಕಚೇರಿಯಂತೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಪಾದಿಸಿದರು.
ವ್ಯವಸ್ಥೆಯನ್ನು ಹಾಳು ಮಾಡಿ ಪ್ರಜಾಪ್ರಭೂತ್ವವನ್ನು ನಿರ್ನಾಮ ಮಾಡಲು ಬಿಜೆಪಿ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.ಮುಂಬೈನಲ್ಲಿ ಬಿಜೆಪಿ ನಾಯಕರೇ ಬುಕ್ ಮಾಡಿ ಶಾಸಕರಿಗೆ ಊಟ, ವಸತಿ ವ್ಯವಸ್ಥೆ ಮಾಡುತ್ತಾರೆ. ಆದರೂ ಬಿಜೆಪಿ ನಾಯಕರು ನಮಗೂ ಆಪರೇಷನ್ ಕಮಲಕ್ಕೂ ಸಂಬಂಧವಿಲ್ಲ ಎಂದು ಹೇಳುತ್ತಾರೆ ಎಂದು ಲೇವಡಿ ಮಾಡಿದರು.

ಆಪರೇಷನ್ ಕಮಲಕ್ಕೆ ಬಳಕೆಯಾದ ದುಡ್ಡನ್ನು ಕೊಟ್ಟವರು ಯಾರು ಎಂದು ದಿನೇಶ್‍ಗುಂಡೂರಾವ್ ಪ್ರಶ್ನಿಸಿದರು. ರಾಜೀನಾಮೆ ನೀಡಿರುವ ಅತೃಪ್ತ ಶಾಸಕರನ್ನು ಬಿಜೆಪಿ ಬಲಿ ತಗೆದುಕೊಳ್ಳುತ್ತಿದೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕರು ಅನರ್ಹಗೊಂಡ ನಂತರ ಅವರನ್ನು ಯಾರೂ ಕೇಳುವವರಿಲ್ಲ. ಅಮಿತ್ ಶಾ ಕೂಡ ಕೈಗೆ ಸಿಗುವುದಿಲ್ಲ. ಅನರ್ಹಗೊಂಡ ಬಳಿಕ ಸರತಿ ಸಾಲಿನಲ್ಲಿ ನಿಂತು ಕಷ್ಟ ಹೇಳಿಕೊಳ್ಳುವ ಪರಿಸ್ಥಿತಿ ಬರುತ್ತದೆ. ಈಗಲಾದರೂ ಪರಿಸ್ಥಿತಿ ಅರ್ಥಮಾಡಿಕೊಳ್ಳಿ. ಬಿಜೆಪಿಯ ಸಂಚಿಗೆ ಬಲಿಯಾಗಬೇಡಿ ಎಂದು  ಅತೃಪ್ತ ಶಾಸಕರಿಗೆ ಮನವಿ ಮಾಡಿದರು.


ಸಂಬಂಧಿತ ಟ್ಯಾಗ್ಗಳು

BJP Dinesh Gundurao KPCC Karnataka Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ