ಸ್ಪೀಕರ್ ಭೇಟಿಯಾಗಲು ಅತೃಪ್ತ ಶಾಸಕರಿಗೆ ಸುಪ್ರೀಂ ಸೂಚನೆ

Karnataka Government crisis

11-07-2019

KPCC ರಾಜೀನಾಮೆ ಸಲ್ಲಿಸಿರುವ ಅತೃಪ್ತ ಶಾಸಕರ ಅರ್ಜಿಯನ್ನು ಇಂದೇ ನಿರ್ಧರಿಸಿ. ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗಬೇಕು. ಹಾಗಾಗಿ ಇಂದು ಎಲ್ಲ ಅತೃಪ್ತ ಶಾಸಕರು ಎಲ್ಲರೂ ಸ್ಪೀಕರ್ ಮುಂದೆ ಹಾಜರಾಗಬೇಕು. ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಮುಖ್ಯ ನ್ಯಾ.ರಂಜನ್ ಗೊಗಯ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಅತೃಪ್ತ ಶಾಸಕರು ಬುಧವಾರ ಸ್ಪೀಕರ್ ವಿಳಂಬ ನೀತಿಯನ್ನು ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಶಾಸಕರು ರಾಜೀನಾಮೆ ಸಲ್ಲಿಸಲು ವಿಧಾನಸೌಧಕ್ಕೆ ಆಗಮಿಸುತ್ತಿರುವ ವಿಷಯ ತಿಳಿದು ಸ್ಪೀಕರ್ ಕಚೇರಿಯಿಂದ ಹೊರ ನಡೆದಿದ್ದಾರೆ. ಹೀಗಾಗಿ ಸ್ಪೀಕರ್ ಕಚೇರಿಯ ಕಾರ್ಯದರ್ಶಿಗಳಿಗೆ ರಾಜೀನಾಮೆಯನ್ನು ಸಲ್ಲಿಸಿದ್ದೇವೆ. ಅಲ್ಲಿಂದ ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಸಲ್ಲಿಸಲಾಗಿದೆ. ಜುಲೈ 9ರಂದು ಕಚೇರಿಗೆ ಆಗಮಿಸಿದ ಸ್ಪೀಕರ್, ಎಂಟು ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ, ಐವರ ಶಾಸಕರ ಪತ್ರಗಳು ಕ್ರಮಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಜುಲೈ 12ರಂದು ವಿಚಾರಣೆಗೆ ಹಾಜರಾಗಬೇಕೆಂದು ಐವರಲ್ಲಿ ಮೂವರಿಗೆ ತಿಳಿಸಿದ್ದಾರೆ.

ಜುಲೈ 12ರಂದು ಅಧಿವೇಶನ ಆರಂಭಗೊಳ್ಳಲಿದ್ದು, ಅಂದೇ ಸ್ಪೀಕರ್ ರಾಜೀನಾಮೆ ಕ್ರಮಬದ್ಧವಾಗಿರುವ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸ್ಪೀಕರ್ ನಡೆ ಯಾರದ್ದೊ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ. ಬಹುಮತವಿಲ್ಲದ ಸರ್ಕಾರ ಶಾಸಕರನ್ನು ಅನರ್ಹಗೊಸುವಂತೆ ಬೆದರಿಕೆಯನ್ನು ಹಾಕಿದೆ. ಶಾಸಕರಾದ ನಾವು ಯಾವುದೇ ಭಯ, ಒತ್ತಡ, ಪ್ರಲೋಭನೆಗೆ ಬಲಿಯಾಗದೇ ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ.

ಸ್ಪೀಕರ್ ಕಾನೂನು ಪ್ರಕಾರ ನಡೆದುಕೊಳ್ಳುತ್ತಿಲ್ಲ ಮತ್ತು ಪಕ್ಷಪಾತ ನೀತಿ ಅನುಸರಿಸುತ್ತಿದ್ದಾರೆ. ಈಗ ಮೈತ್ರಿ ಸರ್ಕಾರ ಅಧಿಕೃತವಾಗಿ ಬಹುಮತ ಕಳೆದುಕೊಂಡಿದೆ. ಹೀಗಿದ್ದರೂ ರಮೇಶ್ ಕುಮಾರ್ ತಾವು ಸದನದ ಸ್ಪೀಕರ್ ಅಂತಾ ಅಂದುಕೊಂಡಿದ್ದಾರೆ. ಬಹುಮತ ಕಳೆದುಕೊಂಡ ಸರ್ಕಾರದಲ್ಲಿ ಸ್ಪೀಕರ್ ಮತ್ತು ಸಿಎಂ ಪವರ್ ಲೇಸ್ ಇದ್ದಂಗೆ. ಹಾಗಾಗಿ ನ್ಯಾಯಾಲಯ ಮಧ್ಯಪ್ರವೇಶಿಸಿ, ಸಂವಿಧಾನ ಉಳಿಸಬೇಕು. ನಮ್ಮ ಅರ್ಜಿಯನ್ನ ಮಾನ್ಯ ಮಾಡಬೇಕು. ಸ್ಪೀಕರ್ ನಮ್ಮ ರಾಜೀನಾಮೆಯನ್ನ ಅಂಗೀಕರಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Karnataka Government MLA BJP Supreme Court


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ