ಶಾಸಕರ ರಾಜೀನಾಮೆ ವಿಚಾರ: ಸುಪ್ರೀಂ ಮೆಟ್ಟಿಲೇರಿದ ಸ್ಪೀಕರ್

Supreme Court

11-07-2019

ಬೆಂಗಳೂರು: ಅತೃಪ್ತ ಶಾಸಕರ ರಾಜಿನಾಮೆ ಕುರಿತಂತೆ ಇಂದು ಸಂಜೆ 6 ಗಂಟೆಯ ಒಳಗಡೆ ನಿರ್ಧಾರ ತಿಳಿಸಲು ಸಾಧ್ಯವಿಲ್ಲ ಎಂದು ಹೇಳಿ ಸ್ಪೀಕರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜಿನಾಮೆ ಅಂಗೀಕಾರ ಕುರಿತಂತೆ ‌ಅತೃಪ್ತ ಶಾಸಕರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಸಂಜೆ 6 ಗಂಟೆಯ ಒಳಗಡೆ ಶಾಸಕರ ರಾಜೀನಾಮೆ ಅಂಗೀಕಾರದ ಬಗ್ಗೆ ನಿರ್ಧಾರವನ್ನು ಕೈಗೊಂಡು ಶುಕ್ರವಾರ ತಿಳಿಸಬೇಕೆಂದು ಸ್ಪೀಕರ್‍ಗೆ ಆದೇಶಿಸಿತ್ತು. ಈಗ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಸ್ಪೀಕರ್, ನನಗೆ ಈ ಕಾಲಮಿತಿಯೊಳಗೆ ಆದೇಶ ನೀಡಲು ಸಾಧ್ಯವಿಲ್ಲ. ನಾನು ನಿಯಮಗಳ ಪ್ರಕಾರವೇ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಹೇಳಿ ಸುಪ್ರೀಂ ಮೆಟ್ಟಿಲೇರಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತುರ್ತು ವಿಚಾರಣೆ ಇಂದು ನಡೆಸುವುದಿಲ್ಲ. ಶುಕ್ರವಾರ ನಡೆಸುವ ಇಂಗಿತವನ್ನು ವ್ಯಕ್ತಪಡಿಸಿದೆ.

 


ಸಂಬಂಧಿತ ಟ್ಯಾಗ್ಗಳು

Speaker Supreme Court Ramesh Kumar Congress


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ