ಅತೃಪ್ತರ ಮನವೊಲಿಕೆ ಸಾಧ್ಯವಿಲ್ಲ: ಸಿದ್ದರಾಮಯ್ಯ

Siddaramaiah Statement

11-07-2019

ಬೆಂಗಳೂರು: ಅತೃಪ್ತ ಶಾಸಕರ ಮನವೊಲಿಕೆ ಸಾಧ್ಯವಿಲ್ಲ. ರಾಜೀನಾಮೆ ಸಲ್ಲಿಸಿದ ಎಲ್ಲ ಶಾಸಕರು ಅಚಲವಾಗಿ ನಿಂತಿರುವುದರಿಂದ ಅವರ ಮನವೊಲಿಕೆ ಮಾಡಲು ಮತ್ತೊಮ್ಮೆ ಮುಂದಾಗಲ್ಲ. ಒಂದು ಮನವೊಲಿಕೆಗೆ ಮುಂದಾದ್ರೆ ರಾಜ್ಯದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ ಎಂದು ಕಾಂಗ್ರೆಸ್ ನಾಯಕರು ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ.

ಕುಮಾರಕೃಪಾ ಅತಿಥಿ ಗೃಹದಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅತೃಪ್ತರ ಮನವೊಲಿಕೆ ಕುರಿತು ಚರ್ಚೆ ನಡೆಯಿತು. ಗುಲಾಂ ನಬಿ ಆಜಾದ್, ವೇಣುಗೋಪಾಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಜರಿದ್ದ ಸಭೆಯಲ್ಲಿ ಸಿಎಂ ಸೇರಿದಂತೆ ಜೆಡಿಎಸ್ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ಈಗಾಗಲೇ ರಾಜೀನಾಮೆ ನೀಡಿರುವ ಶಾಸಕರನ್ನು ಮನವೊಲಿಸುವ ಎಲ್ಲ ಪ್ರಯತ್ನವನ್ನು ಮಾಡಲಾಗಿದೆ. ಇನ್ನು ಮುಂದೆ ಯಾರು ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗಬಾರದು ಎಂದು ಸಿದ್ದರಾಮಯ್ಯನವರು ಸಭೆಯಲ್ಲಿ ತಮ್ಮ ಎಲ್ಲ ಸಚಿವರು ಮತ್ತು ಕಾರ್ಯಕರ್ತರಿಗೆ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Siddaramaiah MLA Congress Resignation


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ