ಓವರ್ ಟೇಕ್‌ ಮಾಡಲು ಹೋಗಿ ಇಬ್ಬರ ದುರ್ಮರಣ !

Kannada News

12-06-2017

ಚಿತ್ರದುರ್ಗ:- ಓವರ್ ಟೇಕ್‌ ಮಾಡುವ ವೇಳೆ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ತುಮಕೂರು ಜಿಲ್ಲೆ ಮಧುಗಿರಿ ಮೂಲದ  ರಾಜಶೇಖರ್(58) ಹಾಗೂ ವಂಶಿ (27) ಮೃತರು. ಗೋಕರ್ಣದಿಂದ ಮಧುಗಿರಿಗೆ ವಾಪಸ್ಸಾಗುತ್ತಿದ್ದ ವೇಳೆ ಅವಘಡ ನಡೆದಿದೆ. ಕಾರಿನಲ್ಲಿ 5 ಜನರ ಪೈಕಿ ಗಾಯಗೊಂಡ ರಾಜಶೇಖರ್ ಪತ್ನಿ, ಮಗ ಹಾಗೂ ಚಾಲಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ