ಕಾಂಗ್ರೆಸ್ ಬಗ್ಗೆ ಸೌಮ್ಯ ರೆಡ್ಡಿ ಹೇಳಿದ್ದೇನು?

Soumya Reddy Statement

11-07-2019

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ. ಪಕ್ಷವನ್ನು ಉಳಿಸಿಕೊಳ್ಳಿ ಎಂದು ಸೋನಿಯಾ ಗಾಂಧಿ ಅವರನ್ನು ಭೇಟಿಯಾದಾಗ ಮನವಿ ಮಾಡಿದ್ದೇನೆ ಎಂದು ಶಾಸಕಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದೇನೆ. ಹೀಗಾಗಿ ಸೋನಿಯಾ ಗಾಂಧಿಯವರನ್ನ ಭೇಟಿಯಾದಾಗ ರಾಜ್ಯದ ಪರಿಸ್ಥಿತಿಯನ್ನು ಅವರಿಗೆ ತಿಳಿಸಿದೆ. ಕಾಂಗ್ರೆಸ್ ರಾಜ್ಯದಲ್ಲಿ ಸಂಕಷ್ಟದಲ್ಲಿದೆ. ಹೀಗಾಗಿ ಕಾಂಗ್ರೆಸ್ಸನ್ನು ಉಳಿಸಿಕೊಳ್ಳಿ ಎಂದು ಮಾಹಿತಿ ಮುಟ್ಟಿಸಿದೆ ಅಷ್ಟೇ. ನಾನು ರಾಜೀನಾಮೆ ನೀಡಲ್ಲ. ಒಂದು ವೇಳೆ ರಾಜೀನಾಮೆ ನೀಡುವುದಾದರೆ ನಿಮಗೆ ಹೇಳುತ್ತೇನೆ ಎಂದು ಹೇಳಿದರು.

ನನ್ನ ತಂದೆಗೆ ಬಹಳ ನೋವಾಗಿದೆ ಮತ್ತು ಬೇಸರವಾಗಿದೆ. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಬಗ್ಗೆ ಎಲ್ಲರಿಗೂ ಗೊತ್ತಿದೆ. ನಮ್ಮ ತಂದೆ 45 ವರ್ಷ ಪಕ್ಷ ಕಟ್ಟಿ ದುಡಿದಿದ್ದಾರೆ. ಒಂದು ವರ್ಷದಿಂದ ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Soumya Reddy MLA Congress Resignation


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ