ಅಗತ್ಯಬಿದ್ದರೆ ವಿಶ್ವಾಸಮತ ಯಾಚನೆ : ಕೃಷ್ಣಭೈರೇಗೌಡ

Krishna bairegowda Statement

11-07-2019

ಬೆಂಗಳೂರು: ರಾಜ್ಯದ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ತೀರ್ಮಾನಿಸಿರುವ ದೋಸ್ತಿ ನಾಯಕರು, ಅಗತ್ಯಬಿದ್ದರೆ ವಿಶ್ವಾಸಮತ ಯಾಚಿಸಲು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜಕೀಯ ವಿಚಾರದ ಬಗ್ಗೆ ಗಂಭೀರ ಚರ್ಚೆಯಾಗಿದ್ದು, ತರಾತುರಿ ಇದ್ದರೆ ಬಿಜೆಪಿಯವರು ಅವಿಶ್ವಾಸ ನಿರ್ಣಯ ಮಂಡಿಸಲಿ ಎನ್ನುವ ನಿಲುವಿಗೆ ಬಂದಿದ್ದಾರೆ. ಅಲ್ಲದೇ ತಮಗಿರುವ ಬಹುಮತ ಸಾಬೀತು ಪಡಿಸಲು ಮೈತ್ರಿ ವಿಶ್ವಾಸ ಹೊಂದಿದ್ದಾರೆ.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಕೃಷ್ಣಭೈರೇಗೌಡ, ರಾಜ್ಯದ ಮೈತ್ರಿ ಸರ್ಕಾರ ಸಂದಿಗ್ಧ ಪರಿಸ್ಥಿಯಲ್ಲಿರುವುದು ಸತ್ಯ. ರಾಜಕೀಯ ಬಿಕ್ಕಟ್ಟುಗಳನ್ನು ವ್ಯವಸ್ಥಿತವಾಗಿ ಬಗೆಹರಿಸುತ್ತೇವೆ. ಸರ್ಕಾರ ಪತನಗೊಳಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನವನ್ನು ವಿಫಲಗೊಳಿಸುತ್ತೇವೆ ಎಂದು ಹೇಳಿದರು.
ಸರ್ಕಾರಕ್ಕೆ ಬಹುಮತ ಇಲ್ಲ ಎಂದು ಬಿಜೆಪಿ ಆರೋಪ ಮಾಡಿದೆ. ಅವರಿಗೆ ತರಾತುರಿ ಅಥವ ತುರ್ತು ಅಗತ್ಯವಿದ್ದರೆ ಅವಿಶ್ವಾಸ ನಿರ್ಣಯ ಮಂಡಿಸಲಿ ಎಂದು ಸವಾಲು ಹಾಕಿದ ಅವರು, ಹಾಗೊಂದು ವೇಳೆ ಬಿಜೆಪಿ ನಾಯಕರು ಅವಿಶ್ವಾಸ ನಿರ್ಣಯ ಮಂಡಿಸಿದ್ದೇ ಆದಲ್ಲಿ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದರು.
ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆರು ಬಾರಿ ದಾಳಿ ನಡೆಸಿದೆ. ಇದು 7 ನೇ ದಾಳಿ. ಆದರೆ ಈ ಬಾರಿ ಹಿಂದಿಗಿಂತ ಹೆಚ್ಚು ತೀವ್ರವಾದ ದಾಳಿ ನಡೆಸಿದೆ. ಈ ಎಲ್ಲಾ ದಾಳಿಗಳನ್ನು ನಾವು ವ್ಯವಸ್ಥಿತವಾಗಿ ಎದುರಿಸುತ್ತೇವೆ ಎಂದರು.


ಸಂಬಂಧಿತ ಟ್ಯಾಗ್ಗಳು

Krishna bairegowda Congress JDS Government crisis


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ