ನಾವು ಈಗಲೂ ಕಾಂಗ್ರೆಸ್ ನಲ್ಲೇ ಇದ್ದೇವೆ: ಬೈರತಿ ಬಸವರಾಜು

Byrathi Basavaraj Statement

11-07-2019

ಬೆಂಗಳೂರು: ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆಯೇ ಹೊರತು ಕಾಂಗ್ರೆಸ್‍ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಈಗಲೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ. ಸುಪ್ರೀಂಕೋರ್ಟ್ ಆದೇಶದಂತೆ ಸ್ಪೀಕರ್ ಮುಂದೆ ಹಾಜರಾಗಲು ಬೆಂಗಳೂರಿಗೆ ತೆರಳುತ್ತಿದ್ದೇವೆ ಎಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೈರತಿ ಬಸವರಾಜು ಮುಂಬೈಯಲ್ಲಿ ಹೇಳಿದ್ದಾರೆ.
ಮುಂಬೈಯ ಖಾಸಗಿ ಹೋಟೆಲ್‍ನಿಂದ ಬೆಂಗಳೂರಿಗೆ ಹೊರಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಂತೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಲು ಸ್ಪೀಕರ್ ಮುಂದೆ ಹಾಜರಾಗಲು ಬೆಂಗಳೂರಿಗೆ ಹೋಗುತ್ತಿದ್ದೇವೆ. ಮತ್ತೊಮ್ಮೆ ರಾಜೀನಾಮೆ ನೀಡುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮಹಾರಾಷ್ಟ್ರದ ಬಿಜೆಪಿ ಸರ್ಕಾರವಾಗಲೀ ಇನ್ನಾರೇ ಆಗಲಿ ನಮ್ಮ ಜೊತೆ ಇಲ್ಲ. ಆದರೆ ನಾವು ರಕ್ಷಣೆ ಕೇಳಿದ್ದಕ್ಕೆ ಇಲ್ಲಿನ ಸರ್ಕಾರ ರಕ್ಷಣೆ ನೀಡಿದೆ, ನಾವು ಸ್ವಯಂ ನಿರ್ಧಾರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ, ಇದರಲ್ಲಿ ಬಿಜೆಪಿಯ ಪಾತ್ರ ಏನೂ ಇಲ್ಲ ಎಂದು ಹೇಳಿದರು.
ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ಆದರೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ಈಗಲೂ ಕಾಂಗ್ರೆಸ್‍ನಲ್ಲೇ ಇದ್ದೇವೆ, ಸಭಾಧ್ಯಕ್ಷರನ್ನು ಭೇಟಿಗೆ ಹೋಗುತ್ತಿದ್ದೇವೆ ಎಂದು ಅವರು ಪುನರುಚ್ಚರಿಸಿದರು.


ಸಂಬಂಧಿತ ಟ್ಯಾಗ್ಗಳು

Byrathi Basavaraj Congress JDS Government crisis


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ