ವಿಶ್ವಾಸಮತ ಯಾಚಿಸಲು ಸಿದ್ಧ ಎಂದ ಸಿಎಂ

HD Kumaraswamy Statement

12-07-2019

ಬೆಂಗಳೂರು: ರಾಜ್ಯದ ಜನತೆಗೆ ಸರಿಯಾದ ಸಂದೇಶ ರವಾನಿಸಬೇಕು ಎಂಬ ಕಾರಣಕ್ಕಾಗಿ ಸ್ವಯಂಪ್ರೇರಣೆಯಿಂದ ವಿಶ್ವಾಸಮತ ಯಾಚಿಸಲು ಸಿದ್ಧ. ಇದಕ್ಕಾಗಿ ಸಮಯ ಕೊಡಿ. ನನ್ನ ಮೇಲೆ ವಿಶ್ವಾಸ ಇದ್ದರೆ ಮಾತ್ರ ಸಿಎಂ ಸ್ಥಾನದಲ್ಲಿ ಕೂರುತ್ತೇನೆ. ಇಲ್ಲವೆಂದಾದರೆ, ಈ ಹುದ್ದೆಯನ್ನು ದುರುಪಯೋಗ ಮಾಡಿಕೊಳ್ಳದೆ, ಈ ಸ್ಥಾನದಿಂದ ಕೆಳಗಿಳಿಯಲು ಸಿದ್ಧವಿರುವುದಾಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಅಧಿವೇಶನದ ಮೊದಲ ದಿನವಾದ ಗುರುವಾರ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಅವರು ಮಾತನಾಡಿದರು. ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು ಬಂದಿಲ್ಲ. ಹಲವು ಶಾಸಕರ ಕೆಲ ನಿರ್ಣಯಗಳಿಂದ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ಆದ್ದರಿಂದ ನಾನು ವಿಶ್ವಾಸ ಮತಯಾಚನೆ ಮಾಡಲು ತೀರ್ಮಾನಿಸಿದ್ದೇನೆ. ಇದನ್ನು ಸದನದ ಸದಸ್ಯರ ಗಮನಕ್ಕೆ ತರುತ್ತಿದ್ದೇನೆ. ನಾನು ಎಲ್ಲದಕ್ಕೂ ತಯಾರಾಗಿ ಬಂದಿದ್ದು, ಸದನದ ಮುಖಾಂತರ ಒಂದು ಉತ್ತಮ ನಿರ್ಧಾರ ಮಾಡುವ ಅವಕಾಶ ಕೋರುತ್ತಿದ್ದೇನೆ ಎಂದರು.

ಪ್ರತಿಪಕ್ಷ ಬಿಜೆಪಿ ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಿದ್ಧತೆ ನಡೆಸಿರುವಂತೆ ಸ್ವತಃ ಸಿಎಂ ವಿಶ್ವಾಸಮತ ಯಾಚಿಸುವುದಾಗಿ ಹೇಳಿ ಪ್ರತಿಪಕ್ಷದವರಿಗೆ ಶಾಕ್ ನೀಡಿದರು ಹಾಗೂ ವಿಶ್ವಾಸಮತ ಯಾಚಿಸಲು ಸಮಯ ನಿಗದಿಪಡಿಸುವಂತೆ ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರಲ್ಲಿ ಮನವಿ ಮಾಡಿಕೊಂಡರು. ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಲು ಸಮಯ ಕೋರಿ ತಮಗೆ ಮಾಡಿಕೊಂಡಿರುವ ಮನವಿ ಕುರಿತು ನಿರ್ಧರಿಸಲು ವಿಧಾನಸಭಾಧ್ಯಕ್ಷರಿಗೆ 7 ದಿನಗಳ ಕಾಲಾವಕಾಶವಿದೆ.


ಸಂಬಂಧಿತ ಟ್ಯಾಗ್ಗಳು

HD Kumaraswamy Karnataka CM Session Ramesh kumar


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ