ಅಧಿವೇಶನಕ್ಕೆ ಆಗಮಿಸಿ ಜೆಡಿಎಸ್ ಶಾಸಕರು

Karnataka Crisis

12-07-2019

ಬೆಂಗಳೂರು: ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದ ಜೆಡಿಎಸ್ ಶಾಸಕರು ಇಂದು ಒಟ್ಟಾಗಿ ವಿಧಾನಸೌಧಕ್ಕೆ ಆಗಮಿಸಿದರು. ವಿಧಾನಮಂಡಲ ಅಧಿವೇಶನ ಆರಂಭವಾಗುವ ಮುನ್ನ ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಭೆ ಸೇರಿ ಅಧಿವೇಶನ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಶಾಸಕರು ಸಮಾಲೋಚನೆ ನಡೆಸಿದರು. ಶಾಸಕಾಂಗ ಪಕ್ಷದ ನಾಯಕರೂ ಆದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಸಕ್ತ ಅಧಿವೇಶನದಲ್ಲಿ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಯಿತು. ಆಡಳಿತ ಪಕ್ಷದ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಶಾಸಕರು ಎಂದಿನಂತೆ ಒಗ್ಗಟ್ಟಿನಿಂದ ಇರಬೇಕು. ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಶಾಸಕರಿಗೆ ಭರವಸೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

MLA Resignation JDS Session Karnataka Crisis


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ