ಹುಬ್ಬಳ್ಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಣಕು ಶವಯಾತ್ರೆ !

Kannada News

12-06-2017

ಹುಬ್ಬಳ್ಳಿ:- ಕನ್ನಡಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಗೆ ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಸಂಘದಿಂದ ನಡೆಸಿದ ಪ್ರತಿಭಟನೆ ವಿಶೇಷ ಗಮನ ಸೆಳೆಯಲಾಯಿತು. ಪ್ರತಿಭಟನಾ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಣಕು ಶವಯಾತ್ರೆ ನಡೆಸಿದರು. ಹುಬ್ಬಳ್ಳಿಯಲ್ಲಿ ಆಟೋ ಚಾಲಕರ ಸಂಘದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಅಣಕು ಶವಯಾತ್ರೆಯನ್ನು  ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು, ಕಳಸಾ ಬಂಡೂರಿ ಹೋರಾಟದ ವಿಚಾರದಲ್ಲಿ ಹೋರಟಕ್ಕೆ ಸ್ಪಂದಿಸದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ನೀರಾವರಿ ಸಚಿವ ಎಮ್ ಬಿ ಪಾಟೀಲ್, ಗೋವಾ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್, ಮೂವರ ನಾಯಕರ ಪ್ರತಿಕೃತಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ಮೂವರ ನಾಯಕರ ಪ್ರತಿಕೃತಿಗಳನ್ನಿಟ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಟೋ ಚಾಲಕರ ಸಂಘ ಈ ಮೂಲಕ ವಿಭಿನ್ನವಾಗಿ ಬಂದ್ ಗೆ ಬೆಂಬಲ ನೀಡಿದ್ದಾರೆ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ