ಸರ್ಕಾರ ಹೆಚ್ಚು ದಿನ ಉಳಿಯಲ್ಲ : ಯಡಿಯೂರಪ್ಪ

B S Yediyurappa Statement

13-07-2019

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲದಿರುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆಗೆ ಮುಂದಾಗಿರುವುದು ವ್ಯವಸ್ಥಿತ ರಾಜಕೀಯ ಷಡ್ಯಂತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಅತೃಪ್ತ ಶಾಸಕರನ್ನು ರಾಜೀನಾಮೆಯನ್ನು ತಡೆಯಲು ನಡೆಸಿರುವ ಪಿತೂರಿ ಹೀಗಿರುವಾಗ ವಿಶ್ವಾಸ ಮತಯಾಚಿಸುವುದರಲ್ಲಿ ಅರ್ಥವೇ ಇಲ್ಲ ಎಂದು ಅವರು ಹೇಳಿದರು.  ನಗರದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತ ಶಾಸಕರು ಪಕ್ಷ ಬಿಟ್ಟು ಹೊರ ಹೋಗುವುದನ್ನು ತಡೆಯಲು ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆಯ ಷಡ್ಯಂತ್ರ ನಡೆಸಿದ್ದಾರೆ ಅಷ್ಟೇ. ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದರು.

ಈಗಿನ ರಾಜಕೀಯ ವಾತಾವರಣ ಬಿಜೆಪಿಗೆ ಅನುಕೂಲಕರವಾಗಿದೆ. ಇಷ್ಟಿದ್ದರೂ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡುವ ಧೈರ್ಯ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದರು. ಸರ್ಕಾರ ಕೆಲವೇ ದಿನಗಳಲ್ಲಿ ಪತನವಾಗುವುದು ನಿಶ್ಚಿತ ಎಂದು ಪುನರುಚ್ಚರಿಸಿದ ಯಡಿಯೂರಪ್ಪನವರು, ಕಾಂಗ್ರೆಸ್-ಜೆಡಿಎಸ್‍ನ ಷಡ್ಯಂತ್ರಗಳಿಗೆ ಶಾಸಕರು ಬಲಿಯಾಗುವುದಿಲ್ಲ. ಕಾದು ನೋಡಿ ಏನಾಗುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.


ಸಂಬಂಧಿತ ಟ್ಯಾಗ್ಗಳು

B S Yediyurappa HD Kumaraswamy Session BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಅವರು ಮಾತನಾಡಿದ ಸಂಭಾಷಣೆಯ ವಿಡಿಯೋ ಹಾಕಿದ್ದರೆ ಚೆನ್ನಾಗಿರುತ್ತಿತ್ತು. ಅಕ್ಷರಗಳು ಸ್ವಲ್ಪ ದೊಡ್ಡದಾಗಿ ಇರಬೇಕು.
  • Abhishek A Banavane
  • Professional