ರಾಯಚೂರಿನಲ್ಲಿ ಬಂದ್ ಸಂಪೂರ್ಣ ವಿಫಲ !

Kannada News

12-06-2017

ರಾಯಚೂರು:- ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಒದಗಿಸಲು ಮತ್ತು ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಯಚೂರು ಜಿಲ್ಲೆಯಲ್ಲಿ ಬಂದ್ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್ ಇಲ್ಲ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದ್ದು, ಎಂದಿನಂತೆ ಶಾಲಾ ಕಾಲೇಜುಗಳು ಇದ್ದು, ಬಸ್ ಗಳು ಎಂದಿನಂತೆ  ಸಂಚರಿಸುತ್ತಿವೆ. ಆಸ್ಪತ್ರೆ, ಅಂಗಡಿ ಮುಂಗಟ್ಟು, ಹೋಟೆಲ್, ಆಟೋಗಳು ಕಾರ್ಯನಿರ್ವಹಿಸುತ್ತಿವೆ.ಇದರಿಂದ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ರಾಯಚೂರಿನಲ್ಲಿ ಯಾವುದೇ ಪ್ರತಿಭಟನೆಗಳು ನಡೆಯದೆ ಜನಜೀವನ ಎಂದಿನಂತೆ ನಡೆಯುತ್ತಿದೆ. ಇನ್ನು ಬಳ್ಳಾರಿಯಲ್ಲಿಯೂ ಕರ್ನಾಟಕ ಬಂದ್ ಗೆ ಬೆಂಬಲ ವ್ಯಕ್ತವಾಗಿಲ್ಲ, ಇಲ್ಲಿ ಎಂದಿನಂತೆ ಸಂಚಾರವಿದೆ, ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ, ಆದ್ದರಿಂದ ಇಲ್ಲಿಯೂ ಜನಜೀವನ ಎಂದಿನಂತೆ ಇದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ