ಮುಂಬೈಗೆ ಹೋಗುವುದರ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದೇನು?

Ramalingareddy Statement

15-07-2019

ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಅತೃಪ್ತರ ರಾಜೀನಾಮೆ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿ ಸರ್ಕಾರ ಪತನದತ್ತ ಸಾಗಿದೆ. ಇನ್ನು, ಅತೃಪ್ತ ಶಾಸಕರು ಮುಂಬೈನ ಖಾಸಗಿ ಹೊಟೇಲ್ ನಲ್ಲೇ ತಂಗಿದ್ದಾರೆ. ಈ ಮಧ್ಯೆ ಕೈ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಶಾಸಕ ರಾಮಲಿಂಗಾರೆಡ್ಡಿ ಕೂಡ ಮುಂಬೈಗೆ ಹೋಗ್ತಾ ಇದ್ದಾರೆಂಬ ಬಗ್ಗೆ ಸುದ್ದಿ ಹರಡಿತ್ತು. ಆದರೆ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕೆಲವರು ಅನಗತ್ಯವಾಗಿ ನಾನು ಮುಂಬೈಗೆ ಹೋಗ್ತಾ ಇದ್ದೇನೆ ಎಂದು ಸತ್ಯಕ್ಕೆ ದೂರವಾದ ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ಬೆಂಗಳೂರಿನಲ್ಲೇ ಇದ್ದೇನೆ. ಮುಂಬೈಗೆ ಹೋಗುತ್ತಿದ್ದೇನೆ ಎಂಬುದು ಕಪೋಲ ಕಲ್ಪಿತ. ಮಾಧ್ಯಮ ಸ್ನೇಹಿತರು ಯಾರೋ ಹಬ್ಬಿಸುವ ಗಾಳಿಸುದ್ದಿಗೆ ಕಿವಿಗೊಡಬಾರದು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Ramalingareddy Mumbai Congress Rebel MLA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ