ಇಂದಿನಿಂದ ಇ ತ್ಯಾಜ್ಯ ಸಂಗ್ರಹ ಅಭಿಯಾನ

E waste Recycling

15-07-2019

ಬೆಂಗಳೂರು, ಜು.15-ಬಿಬಿಎಂಪಿ ಕೇಂದ್ರ ಕಚೇರಿ ಮತ್ತು ಎಲ್ಲ ಎಂಟು ವಲಯಗಳಲ್ಲಿ ನಂತರ ಎಲ್ಲಾ 198 ವಾರ್ಡ್ ಗಳಲ್ಲೂ ಇ-ತ್ಯಾಜ್ಯ ಸಂಗ್ರಹ ಬಿನ್‍ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಹೇಳಿದರು.

ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿಬಿಎಂಪಿ ಹಾಗೂ ಬಿ-ರೆಸ್ಪಾನ್ಸಿಬಲ್ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ಇಂದಿನಿಂದ ಆ.15ರವರೆಗೆ ನಡೆಯುವ ನಿರುಪಯುಕ್ತ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸಂಗ್ರಹಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇ-ತ್ಯಾಜ್ಯ ಸಂಗ್ರಹ ಅಭಿಯಾನದಲ್ಲಿ ಪಾಲಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಾರ್ವಜನಿಕರು ಕೈಜೋಡಿಸಿದರೆ ಮಾತ್ರ ಅಭಿಯಾನ ಯಶಸ್ವಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಅಭಿಯಾನದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕುನಗರದಲ್ಲಿ ಇ-ತ್ಯಾಜ್ಯ ಎಲ್ಲಿ ವಿಲೆವಾರಿ ಮಾಡಬೇಕೆಂಬ ಗೊಂದಲಗಳಿದ್ದವು. ಇದೀಗ ಬಿಬಿಎಂಪಿ ಸ್ವಯಂ ಸೇವಾ ಸಂಸ್ಥೆ ಸಹಯೋಗದಲ್ಲಿ ನಿರುಪಯುಕ್ತ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಟಿವಿ, ವಾಷಿಂಗ್ ಮಿಷನ್, ಕಂಪ್ಯೂಟರ್, ಪ್ರಿಡ್ಜ್, ಟೆಲಿಫೋನ್,  ಐರನ್ ಬಾಕ್ಸ್ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಇ-ತ್ಯಾಜದ ಮೂಲಕ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ನಾಗರಿಕರಲ್ಲಿ ಬಳಕೆಯಾಗದ ಇ-ತ್ಯಾಜ್ಯವನ್ನು ಮನೆಗಳಲ್ಲಿ, ಕಚೇರಿಗಳಲ್ಲಿ ಇಟ್ಟುಕೊಳ್ಳುವ ಬದಲು ಪಾಲಿಕೆಗೆ ನೀಡಿದರೆ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಲಾಗುವುದು. ಅದಕ್ಕಾಗಿ  ಒಂದು ತಿಂಗಳ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದರಂತೆ ಪಾಲಿಕೆ ಕೇಂದ್ರ ಕಚೇರಿ ಸೇರಿದಂತೆ ಎಲ್ಲ ಎಂಟು ವಲಯಗಳ ಕಚೇರಿಗಳ ಆವರಣದಲ್ಲಿ ಇ-ತ್ಯಾಜ್ಯ ಸಂಗ್ರಹಿಸುವ ಬಿನ್ ಗಳನ್ನು ಅಳವಡಿಸಲಾಗುತ್ತದೆ. ಅಲ್ಲಿ ತಮ್ಮ ಮನೆಗಳಲ್ಲಿರುವ ನಿರುಪಯುಕ್ತ ಎಲೆಕ್ಟ್ರಾನಿಕ್ ಉಪಕರಣಗಳನ್ನು ತಂದು ಹಾಕಬಹುದು ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Recycling BBMP E waste Mayor


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ