ಭಾರತದಲ್ಲಿದೆ ಕೇವಲ 4 ಲಕ್ಷ ಎಲೆಕ್ಟ್ರಿಕ್ ವಾಹನಗಳು!

4 lakh electric vehicles in india

15-07-2019

ಭಾರತದಲ್ಲಿ 4 ಲಕ್ಷದಷ್ಟು ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳಿವೆ. ಅದರಲ್ಲಿ ಅರ್ಧದಷ್ಟು ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿವೆ ಎಂದು ರಸ್ತೆ ಸಾರಿಗೆ ಇಲಾಖೆಯ ತನ್ನ ವರದಿಯಲ್ಲಿ ಹೇಳಿದೆ. ಇದರಲ್ಲಿ ಉತ್ತರ ಪ್ರದೇಶದಲ್ಲಿ 1.39 ಲಕ್ಷದಷ್ಟು ರಿಜಿಸ್ಟರ್ ಆಗಿರೋ ಇ ವೆಹಿಕಲ್ ಗಳು ಹಾಗೂ ಸುಮಾರು 75 ಸಾವಿರದಷ್ಟು ದೆಹಲಿಯಲ್ಲಿವೆ ಎಂದು ಹೇಳಲಾಗಿದೆ. ಇನ್ನು ಇ ವೆಹಿಕಲ್ ಹೊಂದಿರುವಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಈ ಅಂಕಿ-ಅಂಶಗಳು ಕೇವಲ ಅಧಿಕೃತವಾಗಿ ದಾಖಲಾಗಿರುವವು. ಇದರ ಹೊರತಾಗಿಯೂ ದೇಶದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ಆಟೋರಿಕ್ಷಾಗಳಿವೆ ಎನ್ನಲಾಗಿದೆ.

ಇನ್ನು ಈ ಬಾರಿ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿದ್ಯುತ್ ಚಾಲಿತ ಅಥವಾ ಬ್ಯಾಟರಿ ಚಾಲಿತ ವಾಹನಗಳಿಗೆ ವಿಶೇಷ ತೆರಿಗೆ ರಿಯಾಯಿತಿ ಘೋಷಿಸಿದ್ದಾರೆ. ಅಲ್ಲದೇ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ವಿದ್ಯುತ್ ಚಾಲಿತ ವಾಹನಗಳಿಗೆ ಉಚಿತವಾಗಿ ನೋಂದಣಿ ಮಾಡಿಸುವ ಪ್ರಸ್ತಾವನೆ ಕೇಂದ್ರದ ಮುಂದಿಟ್ಟಿದ್ದಾರೆ.

ಇನ್ನಾದರೂ ಪರಿಸರ ಸ್ನೇಹಿಯಾದ ವಿದ್ಯುತ್ ಚಾಲಿತ ವಾಹನಗಳನ್ನು ಬಳಸಬೇಕಿದೆ. ಇದರಿಂದ ಜನರ ಆರೋಗ್ಯಕ್ಕೂ ಒಳ್ಳೆಯದು ಹಾಗೂ ಪರಿಸರಕ್ಕೂ ಒಳ್ಳೆಯದು ಎಂಬುದನ್ನು ಮನಗಾಣಬೇಕಿದೆ.


ಸಂಬಂಧಿತ ಟ್ಯಾಗ್ಗಳು

Electric vehicles UP India Delhi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ