ಶಾಸಕರ ರಾಜೀನಾಮೆ: ನಾಳೆ ಸುಪ್ರೀಂ ಮಹತ್ವದ ಆದೇಶ

Supreme Court

16-07-2019

ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು ಬುಧವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಬಂದಾಗ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅರಿಯಲೆಂದು ತ್ರಿಸದಸ್ಯ ಪೀಠದಲ್ಲಿ ಮಂಗಳವಾರ 10:40ಕ್ಕೆ ಆರಂಭಗೊಂಡ ವಿಚಾರಣೆ ಮಧ್ಯಾಹ್ನ 3:24ರವರೆಗೆ ನಡೆಯಿತು.
ಬೆಳಗ್ಗೆಯಿಂದ ಮಧ್ಯಾಹ್ನ ಭೋಜನ ಅವಧಿಯವರೆಗೆ ರಾಜೀನಾಮೆ ಸಲ್ಲಿಸಿದ ಶಾಸಕರ ಪರವಾಗಿ ಮುಕುಲ್ ರೋಹಟಗಿ, ಸ್ಪೀಕರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು. ಮಧ್ಯಾಹ್ನದ ನಂತರ ಸಿಎಂ ಪರವಾಗಿ ರಾಜೀವ್ ಧವನ್ ವಾದ ಮಂಡಿಸಿದರು.
ಇಡೀ ದಿನ ಮೂರು ಕಡೆಯ ವಾದ, ಪ್ರತಿವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್, ನ್ಯಾ.ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ತ್ರಿಸದಸ್ಯ ಪೀಠ ಬುಧವಾರ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸುವುದಾಗಿ ಹೇಳಿತು. ಆದೇಶ ಪ್ರಕಟವಾಗೋವರೆಗೂ ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ.


ಸಂಬಂಧಿತ ಟ್ಯಾಗ್ಗಳು

Rebel MLA Supreme Court Resignation Karnataka Crisis


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ