ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು: ಸುಪ್ರೀಂ ಕೋರ್ಟ್ ತೀರ್ಪು

SC says Speaker free to decide on resignations

17-07-2019

ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧರಿಸಬೇಕು ಎಂದು ತೀರ್ಪು ನೀಡಿದೆ.

ಸ್ಪೀಕರ್ ಅವರು ತಮ್ಮ ವಿವೇಚನೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರ್ಯರಾಗಿದ್ದು, ಅನರ್ಹತೆ ಮತ್ತು ರಾಜೀನಾಮೆ ಅಂಗೀಕಾರ ಎರಡೂ ಸಹ ಸ್ಪೀಕರ್ ಅವರ ಬಳಿಯೇ ಇದ್ದು, ಸೂಕ್ತ ಸಮಯದಲ್ಲಿ ಅವರು ನಿರ್ಧಾರ ತೆಗೆದುಕೊಳ್ಳಬೇಕಿದೆ. ಸಂವಿಧಾನದ 190 ನೇ ವಿಧಿಯನ್ವಯ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಸ್ವೀಕರಿಸಬೇಕು. ಅದಕ್ಕೆ ಕಾಲಮಿತಿ ನಿಗದಿಗೊಳಿಸಿಲ್ಲ. ಆದ್ದರಿಂದ ರಾಜೀನಾಮೆ ಕುರಿತು ಮಧ್ಯಸ್ಥಿಕೆ ವಹಿಸದಿರಲು ಸುಪ್ರೀಂ ಪರೋಕ್ಷವಾಗಿ ಹೇಳಿದೆ.

ನಾಳೆ ಸಿಎಂ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ಆದರೆ ಶಾಸಕರನ್ನು ಭಾಗವಹಿಸುವಂತೆ ಒತ್ತಾಯಿಸುವಂತಿಲ್ಲ ಎಂದು ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಗಳ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ. ವಿಸ್ತೃತ ಪರಾಮರ್ಶೆಯ ಅಗತ್ಯವಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ನಿನ್ನೆ ಬೆಳಗಿನಿಂದ ಮಧ್ಯಾಹ್ನದವರೆಗೆ ಬಂಡಾಯ ಶಾಸಕರ ಪರ, ಸಿಎಂ ಪರ, ಸ್ಪೀಕರ್ ಪರ ವಕೀಲರ ವಾದ – ಪ್ರತಿವಾದಗಳನ್ನು ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ, ಈ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲವೆಂದು ಹೇಳಿದೆ. ಈ ಮೂಲಕ ಸ್ಪೀಕರ್ ಅವರ ಅಂಗಳಕ್ಕೆ ರಾಜೀನಾಮೆ ನೀಡಿದ ಶಾಸಕರ ಚೆಂಡು ಬಂದು ನಿಂತಂತಾಗಿದೆ.


ಸಂಬಂಧಿತ ಟ್ಯಾಗ್ಗಳು

Ramesh kumar Supreme Court Session MLA Resignation


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ