ಸುಪ್ರೀಂ ತೀರ್ಪು : ರಾಜಕೀಯ ನಾಯಕರ ಪ್ರತಿಕ್ರಿಯೆ ಏನು?

Leaders Reaction

17-07-2019

ಬೆಂಗಳೂರು: ಸರ್ಕಾರ ಖಂಡಿತ ಬಲವನ್ನು ಕಳೆದುಕೊಂಡಿದೆ. ಅವರಿಗೆ ಬಹುಮತ ಸಾಬೀತುಪಡಿಸಲು ಅಗತ್ಯ ಸಂಖ್ಯಾಬಲ ಇಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದರು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಮಾತನಾಡಿದ ಅವರು, ಕರ್ನಾಟಕದ ಸಿಎಂ ಅಧಿಕಾರವನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಹುಮತ ಇಲ್ಲ. ಈ ಸಮಯದಲ್ಲಿ ಅವರು ಕಡ್ಡಾಯವಾಗಿ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ನಾನು ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಗೆಲುವು. ಶಾಸಕರ ನೈತಿಕ ಗೆಲುವು. ಇದು ಕೇವಲ ಮಧ್ಯಂತರ ಆದೇಶ. ಭವಿಷ್ಯದಲ್ಲಿ ಸ್ಪೀಕರ್ ಅವರ ಅಧಿಕಾರದ ಕುರಿತು ನಿರ್ಧರಿಸಲಿದೆ ಎಂದರು.

ತೀರ್ಪು ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕುಮಾರಸ್ವಾಮಿಯವರಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅವರು ತಕ್ಷಣ ರಾಜೀನಾಮೆ ನೀಡಬೇಕು. ತೀರ್ಪು ಬಂದ ನಂತರ ಅವರು ವಿಶ್ವಾಸಮತ ಯಾಚನೆವರೆಗೂ ಕಾಯಬೇಕಾಗಿಲ್ಲ ಎಂದರು.

ಬಹು ನಿರೀಕ್ಷಿತ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಪ್ರತಿಕ್ರಿಯಿಸಿದ ಕರ್ನಾಟಕ ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್, ನಾನು ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳುತ್ತೇನೆ. ನನ್ನ ನಿರ್ಧಾರ ಸಂವಿಧಾನ, ಕೋರ್ಟ್ ಮತ್ತು ಲೋಕಪಾಲ ವಿರುದ್ಧ ಇರುವುದಿಲ್ಲ ಎಂದರು.


ಸಂಬಂಧಿತ ಟ್ಯಾಗ್ಗಳು

Supreme Court Ramesh Kumar BS Yadiyurappa Leaders Reaction


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ