ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳ ಬಂದ್ !

Kannada News

12-06-2017

ಹುಬ್ಬಳ್ಳಿ:- ಕರ್ನಾಟಕ ಬಂದ್ ಹಿನ್ನಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಂದ್ ಗೆ ಕಂಡು ಬರದ ಬೆಂಬಲ. ಕೆಲವು ಸೀಮಿತ ಪ್ರದೇಶಗಳನ್ನು ಬಿಟ್ಟರೆ ಉಳಿದೆಲ್ಲ ಪ್ರದೇಶಗಳಲ್ಲಿ ಜನಜೀವನ ಸಾಮಾನ್ಯವಾಗಿದೆ. ಮತ್ತು  ಒತ್ತಾಯಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುತ್ತಿರುವುದು ತಿಳಿದು ಬಂದಿದೆ. ಪ್ರತಿಭಟನಾಕಾರರು ನಗರದ ಚನ್ನಮ್ಮ ವೃತ್ತ ಮತ್ತು ಹೊಸೂರು ಡಿಪೋ ಬಳಿ ಇರುವ ಅಂಗಡಿ ಮುಂಗಟ್ಟು ಮತ್ತು ಬಸ್ ಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುತ್ತಿರುವುದು ಕಂಡು ಬಂದಿದೆ. ಚನ್ನಮ್ಮ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿದ ಸಂಗ್ರಾಮ ಸೇನಾ ಕಾರ್ಯಕರ್ತರು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಹೊರತುಪಡಿಸಿ ಹುಬ್ಬಳ್ಳಿಯಲ್ಲಿ ಜನಜೀವನ ಸಾಮಾನ್ಯವಾಗಿದ್ದು ಕೆಲವು ಕಡೆ ಮಾತ್ರ ಒತ್ತಾಯ ಪೂರ್ವಕವಾಗಿ ಬಂದ್ ಗೆ ಬೆಂಬಲ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಇನ್ನು ಕೊಪ್ಪಳದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ ಹಿನ್ನಲೆ ಕರ್ನಾಟಕ ಬಂದ್ ಗೆ  ಕೊಪ್ಪಳದಲ್ಲಿಯೂ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊಪ್ಪಳದಲ್ಲಿ ಎಂದಿನಂತೆ ತೆರೆದಿರುವ ಅಂಗಡಿಗಳು,  ಬಸ್ ಸಂಚಾರ ಸಹ ಸುಗಮವಾಗಿ ಸಾಗಿದೆ. ಕೊಪ್ಪಳದಲ್ಲಿಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡದ ಜಿಲ್ಲಾ ಆಡಳಿತ, ಆದರೆ ಬಂದ್ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಒದಗಿಸಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ