ಸುಪ್ರೀಂ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಕುಮಾರಸ್ವಾಮಿ!

Karnataka Government Crisis

17-07-2019

ಬೆಂಗಳೂರು: ನಾಳೆ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸ ಮತಯಾಚನೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸುವ ಮೂಲಕ ಅತೃಪ್ತ ಶಾಸಕರಿಗೆ ರಿಯಾಯಿತಿ ನೀಡಿದೆ. ಈ ಮೂಲಕ ಮೈತ್ರಿ ಸರ್ಕಾರ ಅತಂತ್ರಕ್ಕೆ ಸಿಲುಕಿದೆ.
ಇದೆ ವೇಳೆ ರಾಜೀನಾಮೆ ಅಂಗೀಕಾರಕ್ಕೆ ದಿನ ನಿಗದಿ ಪಡಿಸದ ಕೋರ್ಟ್ ನಿರ್ದಿಷ್ಟ ಸಮಯದಲ್ಲಿ ಅತೃಪ್ತ ಶಾಸಕರ ರಾಜೀನಾಮೆ ನಿರ್ಧಾರ ಮಾಡಿ ಎಂದು ಸ್ಪೀಕರ್ ಅವರಿಗೆ ಆದೇಶ ನೀಡಿದೆ.
ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ದೀಪಕ್ ಗುಪ್ತಾ ಹಾಗೂ ಜಸ್ಟೀಸ್ ಅನಿರುದ್ಧ್ ಬೋಸ್ ಅವರಿದ್ದ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು
ನಾಳೆ ವಿಶ್ವಾಸಮತಯಾಚನೆ ಮಾಡಬಹುದು. ಆದ್ರೆ ರಾಜೀನಾಮೆ ನೀಡಿರುವ 15 ಶಾಸಕರು ಭಾಗವಹಿಸುವುದು ಕಡ್ಡಾಯವಲ್ಲ. ಹಾಜರಾಗಬೇಕೋ ಬೇಡವೋ ಎನ್ನುವುದು ಶಾಸಕರ ವಿವೇಚನೆಗೆ ಬಿಟ್ಟ ವಿಚಾರ. ಅತೃಪ್ತ ಶಾಸಕರನ್ನು ಒತ್ತಾಯಪೂರ್ವಕವಾಗಿ ಕರೆತರುವ ಹಾಗಿಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.


ಸಂಬಂಧಿತ ಟ್ಯಾಗ್ಗಳು

Supreme Court HD Kumaraswamy Session Rebel MLAs


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ