ಕೋರ್ಟ್ ಆದೇಶದಂತೆ ಕೆಲಸ: ರಮೇಶ್ ಕುಮಾರ್

Ramesh Kumar Statement

17-07-2019

ಬೆಂಗಳೂರು: ಸುಪ್ರೀಂಕೋರ್ಟ್ ನನ್ನ ಮೇಲೆ ದೊಡ್ಡ ಜವಾಬ್ದಾರಿ ವಹಿಸಿದೆ. ಅದನ್ನು ಉಳಿಸಿಕೊಂಡು ಸಾಮಾನ್ಯರಂತೆ ಸಾಮಾನ್ಯನಾಗಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ವಿಧಾನಸಭಾದ್ಯಕ್ಷ ರಮೇಶ್ ಕುಮಾರ್ ಹೇಳಿದ್ದಾರೆ. ತೀರ್ಪಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ವಿಶ್ವಾಸಮತಯಾಚನೆ ನಡೆಸಲಾಗುತ್ತದೆ. ಶಾಸಕರು ಅಧಿವೇಶನಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದು ಹೇಳಿದರು
ಕೋರ್ಟ್ ಆದೇಶದಿಂದ ಯಾರು ಗೆದ್ದಿಲ್ಲ, ಯಾರೂ ಸೋತಿಲ್ಲ. ಪ್ರಜಾಪ್ರಭುತ್ವ ಸಂಸದೀಯ ಸಂವಿಧಾನದ ಪ್ರಕಾರ ಎಲ್ಲರಿಗೂ ಗೆಲುವು ಸಿಕ್ಕಿದೆ. ಸಂವಿಧಾನಕ್ಕೆ ನಾನು ತಲೆಬಾಗುತ್ತೇನೆಯೇ ಹೊರತು ಬೇರೆ ಯಾರಿಗೂ ನಾನು ತಲೆ ಬಾಗಲ್ಲ ಎಂದರು.
ಉಮೇಶ್ ಜಾಧವ್ ಅವರ ಕೇಸ್‍ನಲ್ಲಿ ಏನು ಮಾಡಿದ್ದೇನೋ ಅದನ್ನೇ ಈಗ ಮಾಡುತ್ತೇನೆ. ಸುಪ್ರೀಂ ಕೋರ್ಟ್ ಹೇಳಿದಂತೆ ಶಾಸಕರ ವಿಚಾರಣೆ ನಡೆಯಲಿದೆ. ಅವರು ಹಾಜರಾಗುತ್ತಾರೋ ಬಿಡುತ್ತಾರೋ ನನಗೆ ಗೊತ್ತಿಲ್ಲ. ಅತೃಪ್ತರು ಯಾರೂ ನನಗೆ ಗೊತ್ತಿಲ್ಲ. ಅವರೆಲ್ಲರೂ ನನ್ನ ಆತ್ಮೀಯರೇ ಎಂದರು.
ಸುಪ್ರೀಂಕೋರ್ಟ್ ಕಾಲವನ್ನು ನಿಗದಿ ಮಾಡಿಲ್ಲ. ಹಾಗಂತ ನಾನು ಯಾರ ಮನವೊಲಿಕೆಗೆ ಮುಂದಾಗಿ ತೀರ್ಮಾನವನ್ನು ಮುಂದೂಡುವುದಿಲ್ಲ. ಸಂವಿಧಾನ ಯಾರ ಕೈಗೂ ಸಿಕ್ಕು ನರಳಬಾರದು, ಅದು ವಿಜೃಂಭಿಸಬೇಕು. ಎಲ್ಲರೂ ಅದನ್ನು ಗೌರವಿಸುವಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Supreme Court Ramesh Kumar Session Rebel MLAs


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ