ಮಹೇಶ್ ನಡೆ ಇನ್ನೂ ನಿಗೂಢ..!

Karnataka Crisis

18-07-2019

ಬೆಂಗಳೂರು: ವಿಧಾನಸಭೆಯಲ್ಲಿ ಅಗ್ನಿಪರೀಕ್ಷೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಹೊಂದಿರುವ ಬೆನ್ನಲ್ಲೇ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ಬಿಎಸ್ಪಿ ಶಾಸಕ ಮಹೇಶ್ ನಿಲುವು ಆತಂಕ ಮೂಡಿಸಿದೆ.
ವಿಶ್ವಾಸಮತ ಯಾಚನೆ ವೇಳೆ ತಟಸ್ಥನಾಗಿರುತ್ತೇನೆ ಎಂದು ಮಹೇಶ್ ಹೇಳಿದ್ದು, ಮಾಜಿ ಪ್ರಧಾನಿ ದೇವೇಗೌಡ ಬಿಎಸ್ ಪಿ ನಾಯಕಿ ಮಾಯಾವತಿ ಅವರನ್ನು ಸಂಪರ್ಕಿಸಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹೇಶ್, ನಾನು ಸಮ್ಮಿಶ್ರ ಸರ್ಕಾರದ ಒಂದು ಭಾಗವಾಗಿದ್ದೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರ ಆದೇಶದ ಮೇಲೆ ಸಮಿಶ್ರ ಸರ್ಕಾರದ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ಬಿಜೆಪಿ ಸೇರಿ 3 ಪಕ್ಷಕ್ಕೂ ನೀವು ಸ್ವತಂತ್ರವಾಗಿರಿ ಎಂದು ಮಾಯಾವತಿ ಅವರು 15 ದಿನಗಳ ಹಿಂದೆಯೇ ಹೇಳಿದ್ದಾರೆ ಎಂದು ತಿಳಿಸಿದರು.
ನನಗೆ ಪ್ರತ್ಯೇಕ ಆಸನ ಕೊಡುವಂತೆ ಸ್ಪೀಕರ್‍ಗೆ ಮನವಿ ಮಾಡಿದ್ದೇನೆ. ಆದರೆ ಸಮ್ಮಿಶ್ರ ಸರ್ಕಾರಕ್ಕೆ ನಾನು ವಿಷಯಾಧಾರಿತ ಬಾಹ್ಯ ಬೆಂಬಲ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.
ನಾನೀಗ ತಾಂತ್ರಿಕವಾಗಿ ಸಮ್ಮಿಶ್ರ ಸರ್ಕಾರದ ಭಾಗವಾಗಿಲ್ಲ, ವಿರೋಧ ಪಕ್ಷದಲ್ಲಿದ್ದೇನೆ. ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Vidhana Soudha Karnataka Crisis Session Mahesh


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ