ರಾಮಲಿಂಗಾರೆಡ್ಡಿ ನಿಲುವಿಗೆ ಬೆಂಬಲವಿಲ್ಲ: ಸೋಮಶೇಖರ್

S T Somashekhar Statement

18-07-2019

ಬೆಂಗಳೂರು: ಕೊನೆ ಕ್ಷಣದಲ್ಲಿ ತಮ್ಮ ನಿಲುವಿನಿಂದ ಹಿಂದೆ ಸರಿದು ಶಾಸಕ ಸ್ಥಾನಕ್ಕೆ ನೀಡಿದ್ದ ರಾಜಿನಾಮೆ ವಾಪಸ್ ಪಡೆದಿರುವ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ‌ಅವರನ್ನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ ಎಂದು ಅತೃಪ್ತ ಶಾಸಕರು ತಿಳಿಸಿದ್ದಾರೆ.
ಮುಂಬೈ ನ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅತೃಪ್ತ ಶಾಸಕರಾದ ಸೋಮಶೇಖರ್, ಮುನಿರತ್ನ ಮತ್ತು ಬೈರತಿ ಬಸವರಾಜ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಮುನ್ನ ನಾವೆಲ್ಲರೂ ಮಾತುಕತೆ ನಡೆಸಿ ಒಮ್ಮತದ ತೀರ್ಮಾನಕ್ಕೆ ಬರಲಾಗಿತ್ತು ಎಂದು ಹೇಳಿದರು.
ಯಾವುದೇ ಕಾರಣಕ್ಕೂ ರಾಜಿನಾಮೆ ವಾಪಸ್ ಪಡೆಯಬಾರದು ಎಂದು ತೀರ್ಮಾನಿಸಲಾಗಿತ್ತು ಆದರೆ, ಈಗ ಎಕಾಎಕಿ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಪಡೆದಿದ್ದಾರೆ ಇದು ಅವರ ನಿಲುವು, ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿದು ರಾಜಿನಾಮೆ ವಾಪಸ್ ಪಡೆದಿದ್ದಾರೆ ನಾವು ಮಾತ್ರ ನಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Vidhana Soudha Session Session S T Somashekhar


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ