ವಿಶ್ವಾಸಮತ ಯಾಚನೆ ವೇಳೆ ಗದ್ದಲ

Trust Vote

18-07-2019

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಕೂಡ ವಿಶ್ವಾಸ ಮತ ಯಾಚನೆ ಸಂಬಂಧ ಚರ್ಚೆ ನಡೆಯುತ್ತಿದ್ದು, ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಜಿ ಸ್ಪೀಕರ್ ಕೆ.ಜೆ.ಬೋಪಯ್ಯ, ಮಾಧುಸ್ವಾಮಿ, ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್, ಡಿ.ಕೆ.ಜಾರ್ಜ್ ಮೊದಲಾದವರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಸಿದ್ದರಾಮಯ್ಯ ಪಕ್ಷಾಂತರ ವಿಷಯವನ್ನು ಪ್ರಸ್ತಾಪಿಸಿ ಕ್ರಿಯಾಲೋಪದ ವಿಷಯವನ್ನು ಪ್ರಸ್ತಾಪಿಸಿದರು.

ವಿಪಕ್ಷ ನಾಯಕರು ವಿಶ್ವಾಸಮತ ಯಾಚನೆಯಲ್ಲಿ ನಾವು ಭಾಗವಹಿಸಲು ಬಂದಿದ್ದೇವೆಯೇ ಹೊರತು, ನಿಮ್ಮ ಭಾಷಣಗಳನ್ನು ಕೇಳಲು ಅಲ್ಲ ಎಂದು ಗದ್ದಲ ನಡೆಸಿ, ತಕ್ಷಣ ವಿಶ್ವಾಸಮತ ಯಾಚಿಸುವಂತೆ ಒತ್ತಾಯಿಸಿದರು. ಆದರೆ, ಸಿಎಂ ಕುಮಾರಸ್ವಾಮಿ, ತಾವು ಮೈತ್ರಿಕೂಟದಲ್ಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ದಿನದಿಂದ ಇಂದಿನವರೆಗೆ ಏನೆಲ್ಲ ನಡೆದಿವೆ ಎಂಬ ಸಂಗತಿಯನ್ನು ಸದನದ ಮೂಲಕ ರಾಜ್ಯದ ಜನರಿಗೆ ತಿಳಿಸಬೇಕಾದ ಅಗತ್ಯವಿದೆ ಎಂದರು.

ಇದಕ್ಕೂ ಮುನ್ನ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಈ ಹಿಂದೆ ಕೇವಲ ಒಂದೇ ದಿನದಲ್ಲಿ ಮುಗಿದಿದೆ. ಅದರಂತೆ ಇಂದು ಕೂಡ ಒಂದೇ ದಿನದಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಎಂದು ಸ್ಪೀಕರ್ ರಮೇಶ್ ಕುಮಾರ್  ಅವರಿಗೆ ಮನವಿ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕುಮಾರ್, ಸಂವಿಧಾನ ಬದ್ಧವಾಗಿ ನಡೆದುಕೊಳ್ಳುವುದಾಗಿ ತಿಳಿಸಿದರು.

ಇನ್ನು ಕರ್ನಾಟಕ ವಿಧಾನಸಭೆಯ ಅತಂತ್ರ ಪರಿಸ್ಥಿತಿ ಇಂದು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸಂಸದರು, ಈ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿ ಸದನದಲ್ಲಿ ಗದ್ದಲ ನಡೆಸಿದರು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Trust Vote Rajya Sabha Session HD Kumaraswamy


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ