ಬಹುಕೋಟಿ ವಂಚಕ ಮನ್ಸೂರ್ ಖಾನ್ ಅರೆಸ್ಟ್

Mansoor Khan arrested at Delhi Airport

19-07-2019

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ಪ್ರಮುಖ ರೂವಾರಿ ಮೊಹಮ್ಮದ್ ಮನ್ಸೂರ್ ಖಾನ್‍ನನ್ನು ತಡರಾತ್ರಿ ವಿಶೇಷ ತನಿಖಾ ತಂಡ ಬಂಧಿಸಿದೆ. ಮಧ್ಯರಾತ್ರಿ 1.30ರ ಸುಮಾರಿಗೆ ದುಬೈನಿಂದ ದೆಹಲಿಗೆ ಬಂದಿಳಿದ ಮನ್ಸೂರ್ ಖಾನ್‍ನನ್ನು ಎಸ್‍ಐಟಿ ಪೊಲೀಸರು ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲೇ ವಶಕ್ಕೆ ತೆಗೆದುಕೊಂಡರು
ಇಂದು ಆತನನ್ನು ಎಸ್‍ಐಟಿ ಪೊಲೀಸರು ಬೆಂಗಳೂರಿಗೆ ಕರೆತರಲಿದ್ದಾರೆ. ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮನ್ಸೂರ್ ವಿರುದ್ಧ 40 ಸಾವಿರ ದೂರು ದಾಖಲಾಗಿತ್ತು. ಹೀಗಾಗಿ ಮನ್ಸೂರ್‍ಗಾಗಿ ಎಸ್‍ಐಟಿ ಮತ್ತು ಇಡಿ ತಂಡ ಕಾಯುತ್ತಿದ್ದು, ಇದೀಗ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಜಾರಿ ನಿರ್ದೇಶನಾಲಯ ಸಹ ದೂರು ದಾಖಲಿಸಿಕೊಂಡು ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಇದುವರೆಗೂ ಮನ್ಸೂರ್​ ಖಾನ್​ ಮತ್ತು ಐಎಂಎ ವಿರುದ್ದ ಕಮರ್ಷಿಯಲ್​ ಸ್ಟ್ರೀಟ್​ ಪೊಲೀಸ್​ ಠಾಣೆಯಲ್ಲಿ 40 ಸಾವಿರಕ್ಕೂ ಹೆಚ್ಚು ವಂಚನೆ ದೂರು ದಾಖಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದಷ್ಟೇ 24 ಗಂಟೆಯಲ್ಲಿ ಭಾರತಕ್ಕೆ ಬರುವುದಾಗಿ ಹೇಳಿದ್ದ ಮನ್ಸೂರ್ ಖಾನ್ ಇದೀಗ ಪೊಲೀಸರ ವಶದಲ್ಲಿದ್ದಾನೆ.

ಹೂಡಿಕೆ ಬಿಸಿನೆಸ್‌ ಹೆಸರಿನಲ್ಲಿ ಹಣ ಹೂಡಿಕೆ ಮಾಡಿಸಿಕೊಂಡು ಬ್ಯಾಂಕ್‌ಗಳಿಗಿಂತ ಹೆಚ್ಚಿನ ಬಡ್ಡಿ ಕೊಡುವ ಆಸೆ ತೋರಿಸಿ ಕೋಟ್ಯಂತರ ರೂ.ವಂಚನೆ ಮಾಡಲಾಗಿತ್ತು. ಕರ್ನಾಟಕ ಮಾತ್ರವಲ್ಲದೇ, ಕೇರಳ, ತಮಿಳುನಾಡು ರಾಜ್ಯಗಳ ಜನರೂ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ. ಸಾವಿರಾರು ಜನರು ಕೋಟ್ಯಂತರ ರೂ. ಹೂಡಿಕೆ ಮಾಡಿದ್ದಾರೆ. ಹೀಗಾಗಿ, ವಂಚನೆ ಮೊತ್ತವೂ ನೂರಾರು ಕೋಟಿ ರೂ. ಇದೆ ಎಂದು ಹೇಳಲಾಗಿದೆ.


ಸಂಬಂಧಿತ ಟ್ಯಾಗ್ಗಳು

Mansoor Khan Cheating Case IMA Jewels Dubai


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ