ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್: ಶೋಭಾಕರಂದ್ಲಾಜೆ

Shobha Karandlaje Statement

19-07-2019

ಬೆಂಗಳೂರು: ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ಶಾಸಕರು ರಾಜೀನಾಮೆ ಕೊಟ್ಟಾಗ ಸ್ಪೀಕರ್ ಅದನ್ನು ಪರಿಗಣಿಸಬೇಕು. ವಿನಾಕಾರಣ ತಡ ಮಾಡುವ ಮೂಲಕ ಅವರು ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕಿ ಶೋಭಾಕರಂದ್ಲಾಜೆ ಆರೋಪಿಸಿದ್ದಾರೆ.
ಮೂರನೇ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಮೊದಲಿಗೆ ಬಹುಮತ ಸಾಬೀತು ಮಾಡುವುದಾಗಿ ಪ್ರಸ್ತಾಪ ಮಾಡಿದ್ದರು. ಈಗ ಬಹುಮತ ಸಾಬೀತು ಮಾಡದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
ಎಷ್ಟು ದಿನ ಈ ಡ್ರಾಮಾ ಮಾಡಲು ಸಾಧ್ಯ ಸುಪ್ರೀಂಕೋರ್ಟ್ ಗೂ ಬೆಲೆ ಕೊಡುತ್ತಿಲ್ಲ, ರಾಜ್ಯಪಾಲರಿಗೂ ಬೆಲೆ ಕೊಡುತ್ತಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದರು. ಕಳೆದ ಒಂದು ವರ್ಷದಿಂದ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ಬರದಿಂದ ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಆದರೆ ಇದ್ಯಾವುದೇ ಕಷ್ಟವನ್ನು ಸರ್ಕಾರ ಕೇಳುತ್ತಿಲ್ಲ. ಈ ರೀತಿಯ ಸರ್ಕಾರವನ್ನು ತೊಲಗಿಸಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಬರಲಿ ಎಂದು ದೇವರಲ್ಲಿ ಕೇಳಿಕೊಂಡಿದ್ದೇನೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Shobha Karandlaje Speaker Ramesh Kumar Karnataka Crisis


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ