1001 ಮೆಟ್ಟಿಲೇರಿ ಶೋಭಾ ಕರಂದ್ಲಾಜೆ ಪ್ರಾರ್ಥಿಸಿದ್ದು ಏನು ಗೊತ್ತ?

Shobha Karandlaje

19-07-2019

ಮೈಸೂರು: ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಮುಂದಿನ ಸಿಎಂ ಆಗಲಿ ಎಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ 1001 ಮೆಟ್ಟಿಲುಗಳನ್ನು ಏರಿ ಪ್ರಾರ್ಥನೆ ನಡೆಸಿದರು.

ಕಳೆದ 2018ರ ವಿಧಾನಸಭೆ ಚುನಾವಣೆಯ ನಂತರ ಅಧಿಕಾರ ಹಿಡಿಯಲು ಬಿಜೆಪಿ ಶತಾಯಗತಾಯ ಪ್ರಯತ್ನಿಸುತ್ತಿದೆ. ಆದರೆ, ಇದುವರೆಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿಲ್ಲ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್‍ನ 15 ಬಂಡಾಯ ಶಾಸಕರು ರಾಜೀನಾಮೆ ನೀಡಿದ ನಂತರ ಬಿಜೆಪಿ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದೆ. ಇಂದು ಸಿಎಂ ಕುಮಾರಸ್ವಾಮಿ ರಾಜ್ಯಪಾಲರ ಆದೇಶದ ಪ್ರಕಾರ ಸದನದಲ್ಲಿ 1:30ರ ಒಳಗೆ ವಿಶ್ವಾಸಮತ ಸಾಬೀತುಪಡಿಸಬೇಕಿದೆ.


ಸಂಬಂಧಿತ ಟ್ಯಾಗ್ಗಳು

Shobha Karandlaje BS Yadiyurappa MP Mysore Temple


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ