ವಿಧಾನಸೌಧಕ್ಕೆ ಖಾಕಿ ಸರ್ಪಗಾವಲು

security alerted in Vidhana soudha

22-07-2019

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಇಂದು ವಿಶ್ವಾಸ ಮತಯಾಚನೆ ಮಾಡಲಿರುವ ಹಿನ್ನಲೆಯಲ್ಲಿ ವಿಧಾನಸೌಧ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದ್ದು ಖಾಕಿ ಸರ್ಪಗಾವಲು ಹಾಕಲಾಗಿದೆ.

ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ ಒಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು 5 ಮಂದಿ ಡಿಸಿಪಿಗಳು, 20 ಮಂದಿ ಎಸಿಪಿ, 20 ಕೆಎಸ್‍ಆರ್‍ಪಿ, 20 ಸಿಎಆರ್ ತುಕಡಿ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ವಿಧಾನಸೌಧ ಸುತ್ತ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಙೆ ಜಾರಿಮಾಡಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ಪಡೆ, ಅರೆ ಸೇನಾಪಡೆಗಳನ್ನು ಭದ್ರತಾ ಕೆಲಸಕ್ಕೆ ನಿಯೋಜಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Vidhana Soudha CM Kumaraswamy Congress-JDS coalition BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ