ಕೆ ಆರ್ ಎಸ್ ನಲ್ಲಿ ಹೆಚ್ಚಿದ ಒಳಹರಿವು

Heavy rain in Uttara Kannada and kodagu

24-07-2019

ಕರಾವಳಿ ಭಾಗದಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಕರಾವಳಿ, ಉತ್ತರ ಕನ್ನಡ, ಕೊಡಗು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಧರೆ ಹಾಗೂ ಗುಡ್ಡ ಕುಸಿತ ಉಂಟಾಗಿದೆ. ಕರಾವಳಿಯ ಹಲವು ತಾಲೂಕುಗಳಲ್ಲಿ ನೆರೆ ಭೀತಿ ಉಂಟಾಗಿದ್ದು, ಸಂಚಾರ ದುಸ್ಥರವಾಗಿದೆ. ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮಧ್ಯೆ ಭಾರೀ ಮಳೆ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಕೊಡಗು ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನು, ಕೊಡಗು ಹಾಗೂ ವೈನಾಡಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಮಂಗಳವಾರ ಸಂಜೆ ವೇಳೆಗೆ 4,682 ಕ್ಯುಸೆಕ್ ಗೆ ಏರಿಕೆಯಾಗಿದೆ.


ಸಂಬಂಧಿತ ಟ್ಯಾಗ್ಗಳು

KRS Heavy Rain KRS Red alert


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ