ಯಡಿಯೂರಪ್ಪ ನಿವಾಸದಲ್ಲಿ ಸಂಭ್ರಮ

Celebration at BSY’s House

24-07-2019

ಬೆಂಗಳೂರು: ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಉತ್ಸಾಹದಲ್ಲಿರುವ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಬಿರುಸಿನ ಚಟುವಟಿಕೆಗಳಲ್ಲಿ ನಿರತರಾದರು. ಸಂಘಪರಿವಾರದ ನಾಯಕರು, ಹಿರಿಯ ಮುಖಂಡರೊಂದಿಗೆ ಸತತ ಸಮಾಲೋಚನೆಯಲ್ಲಿ ತೊಡಗಿರುವ ಅವರು ಸರ್ಕಾರ ‌ರಚನೆಯ ಪ್ರಕ್ರಿಯೆಗಳ ಕುರಿತು ಚರ್ಚಿಸಿದರು.

ಇನ್ನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಅವರಿಗೆ ಶುಭಾಶಯ ಕೋರಲು ಅವರ ನಿವಾಸಕ್ಕೆ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಬಿಎಸ್‍ವೈ ನಿವಾಸ ದವಳಗಿರಿಗೆ ಆಗಮಿಸಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತಿರುವುದು ಸಂತಸ ತಂದಿದೆ ಎಂದು ಹೇಳುತ್ತಾ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಗುರುವಾರ ಅಥವಾ ಶುಕ್ರವಾರ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡುವ ಮಾಹಿತಿ ಲಭಿಸಿದ್ದು, ಎರಡು ದಿನಗಳಲ್ಲಿ 4 ಮುಹೂರ್ತವನ್ನ ಜ್ಯೋತಿಷಿಗಳು ನಿಗದಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 


ಸಂಬಂಧಿತ ಟ್ಯಾಗ್ಗಳು

BS Yediyurappa BJP Celebration Karnataka CM Oath


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ