ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿ ಬಂಧನ

Girl Rape

24-07-2019

ಬೆಂಗಳೂರು: ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನ ಎಳೆದೊಯ್ದು ಕಾಮುಕನೊಬ್ಬ ಅತ್ಯಾಚಾರ ಎಸಗಿದ ಹೀನ ಕೃತ್ಯ ನಗರದ ಹೊರವಲಯದ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯ ಮುಂಭಾಗ ನಿನ್ನೆ ಮಧ್ಯಾಹ್ನ ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಆರೋಪಿಯು ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಕಣ್ಣೀರು ಹಾಕುತ್ತಾ ಮನೆಗೆ ಬಂದ ಬಾಲಕಿ ಪೋಷಕರಿಗೆ ಘಟನೆಯ ಬಗ್ಗೆ ಹೇಳಿಕೊಂಡಿದ್ದಾಳೆ. ತಕ್ಷಣವೇ ಪೋಷಕರು ಸಾತನೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ತಕ್ಷಣವೇ ಕಾರ್ಯಾಚರಣೆ ಕೈಗೊಂಡ ಸಾತನೂರು ಪೊಲೀಸರು ಕೃತ್ಯವೆಸಗಿ ಪರಾರಿಯಾಗಿರುವ ಆರೋಪಿ ಶಿಹಿರಾನನ್ನು ಬಂಧಿಸಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಂತ್ರಸ್ತೆಯ ಪೋಷಕರು, ಗ್ರಾಮಸ್ಥರು, ಶಿಹಿರಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Girl Rape Complain Arrest Bangalore


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ