ಕೇಂದ್ರದ ನಿರ್ದೇಶನಕ್ಕೆ ಕಾಯುತ್ತಿದ್ದೇವೆ: ಯಡಿಯೂರಪ್ಪ

BS Yediyurappa Statement

24-07-2019

ಬೆಂಗಳೂರು: ಬೆಂಗಳೂರಿನ ಚಾಮರಾಜ ಪೇಟೆಯ ಆರ್‍ಎಸ್‍ಎಸ್ ಕಚೇರಿಗೆ ಬಿ.ಎಸ್.ಯಡಿಯೂರಪ್ಪನವರು ಭೇಟಿ ನೀಡಿದರು. ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಸಂಘ ಪರಿವಾರದ ಹಿರಿಯ ನಾಯಕರ ಆಶೀರ್ವಾದ ಪಡೆಯಲು ಬಂದಿದ್ದೇನೆ. ದೆಹಲಿಯಿಂದ ನಿರ್ದೇಶನಕ್ಕಾಗಿ ಕಾಯುತ್ತಿದ್ದೇನೆ. ಯಾವುದೇ ಸಮಯದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸಬಹುದು. ನಂತರ ರಾಜಭವನಕ್ಕೆ ತೆರಳುತ್ತೇವೆ ಎಂದು ಅವರು ಹೇಳಿದರು.

ನಿನ್ನೆ ಸದನದಲ್ಲಿ ವಿಶ್ವಾಸಮತ ಯಾಚಿಸಿದ ಸಿಎಂ ಕುಮಾರಸ್ವಾಮಿಯವರು 99 – 105ರ ಅಂತರದಿಂದ ಸೋತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದು, ಅತ್ಯಂತ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ರಾಜ್ಯಪಾಲರು ಸರ್ಕಾರ ರಚಿಸಲು ಅವಕಾಶ ನೀಡಲಿದ್ದಾರೆ. ನಂತರ ಬಿಎಸ್‍ವೈ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿ, ಸದನದಲ್ಲಿ ಬಹುಮತ ಸಾಬೀತುಪಡಿಸಬೇಕಿದೆ.


ಸಂಬಂಧಿತ ಟ್ಯಾಗ್ಗಳು

BS Yediyurappa Celebration BJP Session


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ