ಮದ್ಯ ಮಾರಾಟ ನಿರ್ಬಂಧ ತೆರವು

Alok Kumar Statement

24-07-2019

ಬೆಂಗಳೂರು: ಮದ್ಯ ಮಾರಾಟಕ್ಕೆ ವಿಧಿಸಿದ್ದ ನಿರ್ಬಂಧವನ್ನು ಇಂದು ಸಂಜೆ ಆರು ಗಂಟೆಗೆಯಿಂದ ಹಿಂಪಡೆಯಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ. ನಿನ್ನೆ ಸದನದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಮಾತಿನ ಚಕಮಕಿ ಹಿನ್ನೆಲೆಯಲ್ಲಿ ಜುಲೈ 25ರವರೆಗೆ ಮದ್ಯ ಮಾರಾಟ ಮತ್ತು 4ಕ್ಕಿಂತ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಲಾಗಿತ್ತು.

ಇದರಿಂದಾಗಿ ಬೆಂಗಳೂರಿನ ಎಲ್ಲ ಪಬ್‍ಗಳು, ವೈನ್ ಶಾಪ್, ಎಂಆರ್‍ಪಿ ಶಾಪ್‍ಗಳು, ಬಾರ್ ಅಂಡ್ ರೆಸ್ಟೊರೆಂಟ್‍ಗಳು ಬಂದ್ ಆಗಿದ್ದವು. ಆದರೆ, ಇಂದು ತಮ್ಮ ಆದೇಶದಲ್ಲಿ ತುಸು ಬದಲಾವಣೆ ಮಾಡಲಾಗಿದ್ದು, ಇಂದು ಸಂಜೆ 6 ಗಂಟೆಯಿಂದ ಮಾರಾಟಕ್ಕ ಇದ್ದ ನಿರ್ಬಂಧ ತೆರವಾಗಲಿದೆ.

 


ಸಂಬಂಧಿತ ಟ್ಯಾಗ್ಗಳು

Liquor Police Commissioner BJP Government Alok Kumar


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ