ಅಧಿಕಾರ ಕಳೆದುಕೊಂಡಿದ್ದಕ್ಕೆ ವಿಷಾದವಿಲ್ಲ: ಹೆಚ್ ಡಿಡಿ

HD Devegowda Statement

24-07-2019

ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡಿದ್ದಕ್ಕೆ ಯಾವುದೇ ವಿಷಾದವಿಲ್ಲ ಎಂದು ಜೆಡಿಎಸ್ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಒಳಗೊಂಡಂತೆ ಯಾವುದೇ ಹಿರಿಯ ಸಚಿವರನ್ನೂ ದೂರುವುದಿಲ್ಲ ಎಂದು ಅವರು ಹೇಳಿದರು. ಜೊತೆಗೆ, ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಇಲ್ಲ. ಒಂದು ರಾಷ್ಟ್ರೀಯ ಪಕ್ಷ ಮತ್ತೊಂದು ಪ್ರಾದೇಶಿಕ ಪಕ್ಷ ಎಂದು ಅವರು ಅಭಿಪ್ರಾಯಪಟ್ಟರು.

ಕರ್ನಾಟಕದಲ್ಲಿ ನಡೆದ ಘಟನೆಗಳನ್ನು ನಾನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ರಾಷ್ಟ್ರೀಯ ಪಕ್ಷ, ಬಿಜೆಪಿ ನಾಯಕತ್ವ ಕುದುರೆ ವ್ಯಾಪರಕ್ಕೆ ಅವಕಾಶ ನೀಡಿತು. ಇಂಥದ್ದನ್ನು ನಾನು ನನ್ನ ಜೀವನದಲ್ಲೇ ನೋಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.

ಮೈತ್ರಿ ಸರ್ಕಾರ ಅಧಿಕಾರ ಕಳೆದುಕೊಂಡಿದ್ದಕ್ಕೆ ಯಾವುದೇ ವಿಷಾದವಿಲ್ಲ ಎಂದ ಜೆಡಿಎಸ್ ಮುಖ್ಯಸ್ಥ, ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಒಳಗೊಂಡಂತೆ ಯಾವುದೇ ಹಿರಿಯ ಸಚಿವರನ್ನೂ ದೂರುವುದಿಲ್ಲ ಎಂದು ಅವರು ಹೇಳಿದರು. ಜೊತೆಗೆ, ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಇಲ್ಲ. ಒಂದು ರಾಷ್ಟ್ರೀಯ ಪಕ್ಷ ಮತ್ತೊಂದು ಪ್ರಾದೇಶಿಕ ಪಕ್ಷ ಎಂದು ಅವರು ಅಭಿಪ್ರಾಯಪಟ್ಟರು.


ಸಂಬಂಧಿತ ಟ್ಯಾಗ್ಗಳು

HD Devegowda HD Kumaraswamy Karnataka Government Siddaramaiah


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ